ಕಾರು-ಬಸ್ ಮುಖಾಮುಖಿ ಡಿಕ್ಕಿ: ಗ್ರಾಮ ಪಂಚಾಯತ್‌ ಸದಸ್ಯ ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ನಿಲುವಾಗಿಲು ಗ್ರಾಪಂ ಸದಸ್ಯ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭಾಸ್ಕರ್ ಸ್ವಿಫ್ಟ್ ಕಾರಿನಲ್ಲಿ ತನ್ನ ಪತ್ನಿ, ಪುತ್ರ ಹಾಗೂ ತಾಯಿಯೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!