ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುತ್ತದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ಫ್ರೀಡಂಪಾರ್ಕ್ ನಲ್ಲಿ ಆಯೋಜಿಸಿದ್ದ ʼನರೇಗಾ ಉಳಿಸಿ ಆಂದೋಲನ ಮತ್ತು ಲೋಕಭವನ ಚಲೋʼ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ ಎಂದರು.
ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜಿ ರಾಮ್ ಜಿ’ ಜಾರಿ ಮಾಡಿದ್ದಾರೆ. ಮನರೇಗಾ ಯೋಜನೆಯಲ್ಲಿ ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆ ಮಾಡಿದ್ದಾರೆ. ದಶರಥ ರಾಮ ಇಲ್ಲ, ಕೌಸಲ್ಯ ರಾಮ ಇಲ್ಲ, ಸೀತಾ ರಾಮ ಸಹ ಇಲ್ಲ. ಈ ಕಾಯ್ದೆಯಲ್ಲಿ ರಾಮ ಇಲ್ಲ. ಬಡವರು ದಲಿತರು, ರೈತರ ಬಗ್ಗೆ ಚಿಂತಿಸುವುದು ಕಾಂಗ್ರೆಸ್ ಮಾತ್ರ. ಬಡವರ ಬಗ್ಗೆ ಮಾತಾಡುವುದು ಕಾಂಗ್ರೆಸ್ ಮಾತ್ರ ಎಂದು ಹೇಳಿದರು.



