ಭಾರತೀಯ ಮೂಲದ ಗಾಯಕಿ ಫಲ್ಗುಣಿ ಶಾ ಮುಡಿಗೆ ಗ್ರ್ಯಾಮಿ ಪ್ರಶಸ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಭಾರತೀಯ ಮೂಲದ ಅಮೆರಿಕನ್ ಗಾಯಕಿ ಫಲ್ಗುಣಿ ಶಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಜಯಿಸಿದ್ದಾರೆ. ‘ಎ ಕಲರ್‌ಫುಲ್ ವರ್ಲ್ಡ್’ ಅತ್ಯುತ್ತಮ ಮಕ್ಕಳ ಸಂಗೀತ ಆಲ್ಬಂ ಎಂದು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ತಮ್ಮ ಇನ್​ಸ್ಟಾಗ್ರಾಮ್​ನಲ್ಲಿಸಂತಸದ ವಿಷಯವನ್ನು ಹಂಚಿಕೊಂಡ ಫಲ್ಗುಣಿ, ‘ಇಂದು ನಡೆದ ಮ್ಯಾಜಿಕ್ ಅನ್ನು ವಿವರಿಸಲು ನನ್ನ ಬಳಿ ಪದಗಳೇ ಇಲ್ಲ. ಗ್ರ್ಯಾಮಿ ಪ್ರೀಮಿಯರ್ ಸಮಾರಂಭದಲ್ಲಿ ಪ್ರಶಸ್ತಿ ಸಿಕ್ಕಿರುವುದು ಸಂತಸ ನೀಡಿದೆ. ‘ಕಲರ್‌ಫುಲ್ ವರ್ಲ್ಡ್‌’ನಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬರಿಗೂ ಹಾಗೂ ರೆಕಾರ್ಡಿಂಗ್ ಅಕಾಡೆಮಿಗೆ ಧನ್ಯವಾದಗಳು’ ಅಂತಾ ಬರೆದುಕೊಂಡಿದ್ದಾರೆ.
ಗಾಯಕಿ ಫಲ್ಗುಣಿ ಶಾ ಅವರು ಪ್ರಸ್ತುತ ನ್ಯೂಯಾರ್ಕ್‌ನಲ್ಲಿ ನೆಲೆಸಿದ್ದಾರೆ. ಅವರು ಈ ಹಿಂದೆ ಎಆರ್ ರೆಹಮಾನ್ ಅವರೊಂದಿಗೆ ಸಹ ಕೆಲಸ ಮಾಡಿದ್ದರು.
ಎರಡು ಬಾರಿ ಗ್ರ್ಯಾಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅತ್ಯುತ್ತಮ ಮಕ್ಕಳ ಸಂಗೀತ ಆಲ್ಬಮ್ ವಿಭಾಗದಲ್ಲಿ ನಾಮನಿರ್ದೇಶನಗೊಂಡ ಏಕೈಕ ಭಾರತೀಯ ಮೂಲದ ಮಹಿಳೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!