ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಗೀತೆ ಜನಗಣಮನಕ್ಕೆ ಮೂರು ಬಾರಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮ್ಯೂಸಿಕ್ ಪುರಸ್ಕಾರ ಗ್ರ್ಯಾಮಿ ಅವಾರ್ಡ್ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿ ರಿಕ್ಕಿ ಕೇಜ್ (Ricky Kej) ಹೊಸ ಬಗೆಯ ಟ್ಯೂನ್ ಟಚ್ ಕೊಟ್ಟಿದ್ದಾರೆ.
ಸ್ವಾತಂತ್ರ್ಯ ದಿನಕ್ಕೂ ಮುನ್ನ ಅಂದರೆ ಇದೇ ಆಗಸ್ಟ್ 14ರಂದು 5ಗಂಟೆಗೆ ರಿಕ್ಕಿ ಕೇಜ್ ಸಾರಥ್ಯದ ವಿಭಿನ್ನ ಬಗೆಯ ರಾಷ್ಟ್ರಗೀತೆ (Ricky Kej on Jana Gana Mana) ಬಿಡುಗಡೆಯಾಗಲಿದೆ.
ಲಂಡನ್ ಅಬ್ಬೆ ರೋಡ್ ಸ್ಟುಡಿಯೋಸ್ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಕೇವಲ 3 ಗಂಟೆ ಸಮಯದಲ್ಲಿಯೇ, 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಸಹಯೋಗದಲ್ಲಿ ಜನಗಣಮನ ಸಿದ್ಧವಾಗಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡ ರಿಕ್ಕಿ ಕೇಜ್, ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಡಲಾಗಿದೆ. ಈ ರಾಷ್ಟ್ರಗೀತೆ ಪ್ರೆಸೆಂಟ್ ಮಾಡಲು ನಾನು ಕಾತುರನಾಗಿದ್ದೇನೆ. ಲಂಡನ್ ಮೂಲದ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾದ ಸಹಯೋಗದಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಈ ಹಿಂದೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಕೈಚಳಕದಿಂದ ಭಾರತದ ರಾಷ್ಟ್ರಗೀತೆ ಸಿದ್ಧವಾಗಿದೆಎಂದು ಸಂತಸ ಹಂಚಿಕೊಂಡರು.