ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ ಮುಕ್ತಾಯ: ಮುಂದಿನ ಮೀಟಿಂಗ್ ಮುಂಬೈ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಸಭೆ ಸೇರಿದ ವಿಪಕ್ಷಗಳ ಮಹಾ ಮೈತ್ರಿಕೂಟದ ಮುಂದಿನ ಸಭೆ ಆಗಸ್ಟ್ 6ಕ್ಕೆ ಮುಂಬೈನಲ್ಲಿ ನಿಗದಿಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಲಿಸುವ ನಿಟ್ಟಿನಲ್ಲಿ ರಣತಂತ್ರ ರೂಪಿಸಲು ಬೆಂಗಳೂರಿನಲ್ಲಿ ನಡೆದಿದ್ದ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ಮುಕ್ತಾಯವಾಗಿದೆ.

ಸಭೆ ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಜಾಪ್ರಭುತ್ವ ರಕ್ಷಣೆಗೆ ದೇಶದ ಜನರ ರಕ್ಷಣೆಗೆ ಅತ್ಯಗತ್ಯವಾಗಿತ್ತು. ಹೀಗಾಗಿ ನಾವೆಲ್ಲ ಒಂದುಗೂಡಿ ಒಂದೇ ಧ್ವನಿಯಲ್ಲಿ ನಿರ್ಣಯ ಕೈಗೊಂಡಿದ್ದೇವೆ. ಮೈತ್ರಿ ಕೂಟಕ್ಕೆ INDIA (Indian National Development Inclusive Alliance) ಎಂದು ನಾಮಕರಣ ಮಾಡಿದ್ದೇವೆ . ಮುಂದಿನ ಸಭೆ ಆಗಸ್ಟ್ 6ಕ್ಕೆ ಮುಂಬೈನಲ್ಲಿ ನಡೆಯಲಿದೆ. ಕ್ಯಾಂಪೇನ್ ಮ್ಯಾನೇಜ್ಮೆಂಟ್ ನಿರ್ಣಯಕ್ಕೆ ಉಪ ಸಮಿತಿ ರಚನೆ ಮಾಡಲಾಗುವುದು ಎಂದರು.

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದಿದ್ದ ವಿಪಕ್ಷಗಳ ಸಭೆಯಲ್ಲಿ 26 ಪಕ್ಷಗಳ 40ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದರು. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಬಿಹಾರ ಸಿಎಂ ನಿತೀಶ್ ಕುಮಾರ್, ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಶಿವಸೇನೆಯ ಉದ್ಧವ್ ಠಾಕ್ರೆ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!