ಮೈಸೂರಿನಲ್ಲಿ ಅದ್ಧೂರಿ ಕನ್ನಡ ಹಬ್ಬ: ಸಚಿವ ಎಚ್.ಸಿ. ಮಹದೇವಪ್ಪರಿಂದ ಧ್ವಜಾರೋಹಣೆ

ಹೊಸದಿಗಂತ ವರದಿ ಮೈಸೂರು:

ನಗರದಲ್ಲಿ ಬುಧವಾರ ಅದ್ದೂರಿಯಾಗಿ 68 ನೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ಸಿ ಮಹದೇವಪ್ಪ ದ್ವಜರೋಹಣ ನೆರವೇರಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ವೋವೆಲ್ ಮೈದಾನದಲ್ಲಿ 68 ನೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಚಿವರು ಹಾಗೂ ಗಣ್ಯರು ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ನೆರವೇರಿಸಿದರು. ಬಳಿಕ ತೆರೆದ ವಾಹನದಲ್ಲಿ ತುಕಡಿಗಳ ಪರಿವೀಕ್ಷಣೆ ಮಾಡಿದರು. ಪೆರೇಡ್ ನಲ್ಲಿ 18 ತಂಡಗಳು ಭಾಗವಹಿಸಿದ್ದವು. ಆಕರ್ಷಕ ಪಥ ಸಂಚಲನ ನಡೆಯಿತು.

ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ 50 ಸಾಧಕರು ಹಾಗೂ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರಶಸ್ತಿ ಪಡೆದ 17 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!