ನಾಳೆ ಮಹಾಕುಂಭಮೇಳಕ್ಕೆ ವೈಭವದ ತೆರೆ: ಇಂದು 1.24 ಕೋಟಿಗೂ ಹೆಚ್ಚು ಭಕ್ತರಿಂದ ಪುಣ್ಯ ಸ್ನಾನ

ಹೊಸದಿಗಂತ ಡಿಜಿಟಲ್ ಡೆಸ್ಕ್; 

ಉತ್ತರ ಪ್ರದೇಶದ ಪ್ರಯಾಗ್‌ರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಕೊನೆಯ ಘಟದತ್ತ ತಲುಪಿದೆ. ಫೆಬ್ರವರಿ 26ರಂದು ಈ ವಿಶ್ವದ ಅತೀ ದೊಡ್ಡ ಧಾರ್ಮಿಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ತೆರೆ ಬೀಳಲಿದೆ.

ಇಂದು (ಫೆಬ್ರವರಿ 25) ರಾತ್ರಿ 8 ಗಂಟೆಯವರೆಗೆ ಪ್ರಯಾಗರಾಜ್‌ನಲ್ಲಿರುವ ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದಲ್ಲಿ 1.24 ಕೋಟಿಗೂ ಹೆಚ್ಚು ಜನರು ಪವಿತ್ರ ಸ್ನಾನ ಮಾಡಿದರು. ಉತ್ತರ ಪ್ರದೇಶ ಮಾಹಿತಿ ಇಲಾಖೆಯ ಪ್ರಕಾರ, ಜನವರಿ 13ರಿಂದ ಮಹಾಕುಂಭದಲ್ಲಿ ಸ್ನಾನ ಮಾಡಿದ ಒಟ್ಟು ಭಕ್ತರ ಸಂಖ್ಯೆ 63.36 ಕೋಟಿಯನ್ನು ಮೀರಿದೆ.

ನಾಳೆ ಮಹಾಶಿವರಾತ್ರಿಯ ಅಂತಿಮ ದಿನವಾಗಿದ್ದು, ಹೀಗಾಗಿ ಮಹಾಕುಂಭದಲ್ಲಿ ಭಾಗವಹಿಸಲು ಭಕ್ತರು ಪ್ರಯಾಗ್‌ರಾಜ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಇಂದು ಸಂಜೆ 4 ಗಂಟೆಯಿಂದ ಮಹಾಕುಂಭ ಪ್ರದೇಶವನ್ನು ವಾಹನ ರಹಿತ ವಲಯವೆಂದು ಘೋಷಿಸಲಾಗಿದೆ. ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ವಿನಾಯಿತಿ ನೀಡಲಾಗುವುದು ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!