November 8, 2026
Sunday, November 8, 2026
spot_img

ಬೆಳಕಿನ ಹಬ್ಬಕ್ಕೆ ಭರ್ಜರಿ ಸಿದ್ಧತೆ: ಹೂವು, ಹಣ್ಣು ಖರೀದಿಗೆ ಕೆ.ಆರ್. ಮಾರ್ಕೆಟ್‌ನಲ್ಲಿ ಮುಗಿಬಿದ್ದ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದೀಪಾವಳಿ ಹಬ್ಬದ ಸಂಭ್ರಮಕ್ಕೆ ಸಿಲಿಕಾನ್ ಸಿಟಿ ಸಜ್ಜಾಗಿದೆ. ಮನೆಮನೆಗಳಲ್ಲಿ ದೀಪ ಬೆಳಗಿಸಿ ಸಂಭ್ರಮಿಸುವ ಬೆಳಕಿನ ಹಬ್ಬಕ್ಕೆ ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಮಾರುಕಟ್ಟೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಅದರಲ್ಲೂ ಬೆಂಗಳೂರಿನ ಪ್ರಸಿದ್ಧ ಕೆ.ಆರ್. ಮಾರ್ಕೆಟ್‌ನಲ್ಲಿ ಹಬ್ಬದ ಖರೀದಿಯ ಭರಾಟೆ ಜೋರಾಗಿದೆ.

ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗಾಗಿ ಭಾನುವಾರ ಬೆಳಗ್ಗೆಯಿಂದಲೇ ಜನರು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಮಾರುಕಟ್ಟೆಯೆಲ್ಲೆಡೆ ಹಬ್ಬದ ಕಳೆ ಮನೆಮಾಡಿದೆ.

ಬೆಳಗಿನ ಜಾವ 3 ಗಂಟೆಯಿಂದಲೇ ಶುರುವಾಯ್ತು ಖರೀದಿ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೆ.ಆರ್. ಮಾರ್ಕೆಟ್‌ನಲ್ಲಿ ಮುಂಜಾನೆಯಿಂದಲೇ ವ್ಯಾಪಾರ ವಹಿವಾಟು ಚುರುಕುಗೊಂಡಿದೆ. ಬೆಳಗಿನ ಜಾವ 3 ಗಂಟೆಯಿಂದಲೇ ಗ್ರಾಹಕರು ಮಾರುಕಟ್ಟೆಗೆ ಆಗಮಿಸಿ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಹಣ್ಣು, ಹೂವು, ಪೂಜಾ ಸಾಮಗ್ರಿಗಳು ಹಾಗೂ ಅಲಂಕಾರಿಕ ವಸ್ತುಗಳನ್ನು ಕೊಳ್ಳಲು ಜನರು ಮುಗಿಬಿದ್ದಿದ್ದಾರೆ.

ಇದನ್ನೂ ಓದಿ:

ಹೂವು, ಹಣ್ಣುಗಳ ಖರೀದಿಗೆ ಮುಗಿಬಿದ್ದ ಜನ

ಮಾರುಕಟ್ಟೆಯಲ್ಲಿ ಬಣ್ಣಬಣ್ಣದ ಹೂವುಗಳು ಗ್ರಾಹಕರ ಗಮನ ಸೆಳೆಯುತ್ತಿವೆ. ಹಬ್ಬದ ಪೂಜೆ ಮತ್ತು ಮನೆಯ ಅಲಂಕಾರಕ್ಕಾಗಿ ಜನರು ವಿವಿಧ ಬಗೆಯ ಹೂವುಗಳನ್ನು ಖರೀದಿಸುತ್ತಿದ್ದಾರೆ. ಹಣ್ಣುಗಳ ಖರೀದಿಯೂ ಜೋರಾಗಿದ್ದು, ವ್ಯಾಪಾರಗಳು ಬೆಳಗ್ಗಿನಿಂದಲೇ ಬಿಡುವಿಲ್ಲದೆ ವ್ಯಾಪಾರದಲ್ಲಿ ತೊಡಗಿದ್ದಾರೆ.

ಕೆ.ಆರ್. ಮಾರ್ಕೆಟ್‌ನಲ್ಲಿ ಕಾಲಿಡಲೂ ಜಾಗವಿಲ್ಲ!

ಹಬ್ಬದ ಖರೀದಿಗೆ ಸಾವಿರಾರು ಜನರು ಆಗಮಿಸಿರುವುದರಿಂದ ಕೆ.ಆರ್. ಮಾರ್ಕೆಟ್‌ನಲ್ಲಿ ಭಾರೀ ಜನಸಂದಣಿ ನಿರ್ಮಾಣವಾಗಿದೆ. ಮಾರುಕಟ್ಟೆಯ ಪ್ರಮುಖ ರಸ್ತೆಗಳು ಹಾಗೂ ಹೂವಿನ ಮಳಿಗೆಗಳ ಸುತ್ತಮುತ್ತ ಜನಜಂಗುಳಿ ಕಂಡುಬಂದಿದೆ.

Must Read

Skip to toolbar