Saturday, June 10, 2023

Latest Posts

ನೂತನ ಸಂಸತ್ ಭವನ ಉದ್ಘಾಟನೆಗೆ ಸಕಲ ಸಿದ್ಧತೆ: ವೇಳಾಪಟ್ಟಿ ಹೀಗಿದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೂತನ ಸಂಸತ್ ಭವನ ಉದ್ಘಾಟನೆಗೆ ಸಕಲ ಸಿದ್ಧತೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ ನೂತನ ಸಂಸತ್ ಭವನವನ್ನು ಉದ್ಘಾಟಿಸಲಿದ್ದಾರೆ. ಎಎಪಿ, ಡಿಎಂಕೆ, ಟಿಎಂಸಿ ಮತ್ತು ಎನ್‌ಸಿಪಿ ಸೇರಿದಂತೆ 21 ವಿರೋಧ ಪಕ್ಷಗಳು ಗೈರು ಹಾಜರಿಯಲ್ಲಿ ಸಂಸತ್‌ ಭವನ ಉದ್ಘಾಟನೆಯಾಗಲಿದೆ. ವೈಎಸ್‌ಆರ್‌ಸಿಪಿ, ಟಿಡಿಪಿ, ಬಿಜೆಡಿ, ಅಕಾಲಿದಳ, ಜೆಡಿಎಸ್ ನಂತಹ 25 ಪಕ್ಷಗಳು ಪಾಲ್ಗೊಳ್ಳುವುದಾಗಿ ಘೋಷಿಸಿವೆ. ಇದೇ ವೇಳೆ ಉದ್ಘಾಟನಾ ಕಾರ್ಯಕ್ರಮ ಎರಡು ಹಂತಗಳಲ್ಲಿ ನಡೆಯಲಿದೆ. ಹೋಮ-ಹವನ ಮತ್ತು ಪೂಜೆಯೊಂದಿಗೆ ಸಮಾರಂಭದ ಉದ್ಘಾಟನೆ ನಡೆಯಲಿದೆ. ಪ್ರಧಾನಿ ಭಾಷಣದೊಂದಿಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ.

ಕಾರ್ಯಕ್ರಮದ ವಿವರ

  • ಬೆಳಗ್ಗೆ 7.30ಕ್ಕೆ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಹವನ ಹಾಗೂ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಉಪ ಸಭಾಪತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುವರು.
  • ಪೂಜೆಯ ನಂತರ ಲೋಕಸಭೆಯ ಒಳಗೆ ಬೆಳಗ್ಗೆ 8.30 ರಿಂದ 9 ರವರೆಗೆ ಸೆಂಗೋಲ್ ಪ್ರತಿಷ್ಠಾಪನೆ ನಡೆಯಲಿದೆ. ನೂತನ ಸಂಸತ್ ಭವನದಲ್ಲಿ ಸ್ಪೀಕರ್ ಆಸನದ ಪಕ್ಕದಲ್ಲಿರುವ ಗಾಜಿನ ಪೆಟ್ಟಿಗೆಯಲ್ಲಿ ಐತಿಹಾಸಿಕ ರಾಜದಂಡವನ್ನು ಅಳವಡಿಸಲಾಗುವುದು.
  • ‘ಅಧೀನಂ’ (ತಮಿಳುನಾಡಿನ ಶೈವ ಮಠಗಳ ಪುರೋಹಿತರು), ಐತಿಹಾಸಿಕ ಸೆಂಗೋಲ್ ತಯಾರಿಕೆಯಲ್ಲಿ ಶ್ರಮಿಸಿದ ವುಮ್ಮಿಡಿ ಚಿನ್ನಾಭರಣ ವ್ಯಾಪಾರಿಗಳು ಮತ್ತು ನೂತನ ಸಂಸತ್ ಭವನವನ್ನು ನಿರ್ಮಿಸಿದವರನ್ನು ಸನ್ಮಾನಿಸಲಾಗುವುದು.
  • ಬೆಳಗ್ಗೆ 9.30ಕ್ಕೆ ಪಂಡಿತರು, ಸಾಧುಗಳು ಭಾಗವಹಿಸುವ ಪ್ರಾರ್ಥನಾ ಸಭೆ ನಡೆಯಲಿದೆ.
  • ಮಧ್ಯಾಹ್ನ 12 ಗಂಟೆಗೆ ರಾಷ್ಟ್ರಗೀತೆ ಹಾಡುವುದರೊಂದಿಗೆ ಎರಡನೇ ಹಂತದ ಕಾರ್ಯಕ್ರಮ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಎರಡು ಕಿರುಚಿತ್ರಗಳನ್ನು ಪ್ರದರ್ಶಿಸಲಾಗುವುದು.
  • ರಾಜ್ಯಸಭಾ ಉಪಾಧ್ಯಕ್ಷರು ಸ್ವಾಗತ ಭಾಷಣ ಮಾಡುವರು. ಉಪಾಧ್ಯಕ್ಷರು ಹಾಗೂ ಅಧ್ಯಕ್ಷರು ಸಂದೇಶ ನೀಡಲಿದ್ದಾರೆ.
  • ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಭಾಷಣ ಮಾಡಲಿದ್ದಾರೆ.
  • ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ ಮಾಡಲಿದ್ದು, ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿ ಬಿಡುಗಡೆ ಮಾಡಲಾಗುವುದು.
  • ಮಧ್ಯಾಹ್ನ 2.30ಕ್ಕೆ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಭಾಷಣದೊಂದಿಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!