September 17, 2026
Thursday, September 17, 2026
spot_img

ಸಂಸತ್ತಿನಲ್ಲಿ ಧರ್ಮೇಂದ್ರ ಪ್ರಧಾನ್‌ಗೆ ಅದ್ಧೂರಿ ಸ್ವಾಗತ, ಕಾಂಗ್ರೆಸ್ ಕಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್ ಪರೀಕ್ಷೆಯ ಅಕ್ರಮದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ ಪರಿಣಾಮ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಸೋಮವಾರ ಅವರು ಸಂಸತ್ತಿಗೆ ಆಗಮಿಸುತ್ತಿದ್ದಂತೆ ಬಿಜೆಪಿ ಸಂಸದರು ಶಾಲು ಹೊದಿಸಿ, ಸಾಂಪ್ರದಾಯಿಕ ಟೋಪಿ ಧರಿಸಿ ಅತ್ಯಂತ ಸಂಭ್ರಮದಿಂದ ಸ್ವಾಗತಿಸಿದರು. ಸಂಸತ್ತಿನ ಆವರಣದಲ್ಲಿ ಜೈಕಾರಗಳೊಂದಿಗೆ ಹೂಮಾಲೆ ಹಾಕಿ ಅವರನ್ನು ಅಭಿನಂದಿಸಲಾಯಿತು.

ಬಿಜೆಪಿ ನಡೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ

ಆಡಳಿತ ಪಕ್ಷದ ಈ ಸಂಭ್ರಮಾಚರಣೆಯನ್ನು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಖಡಕ್ ಆಗಿ ಟೀಕಿಸಿದ್ದಾರೆ. ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ಕಾಯ್ದೆಯ ಚರ್ಚೆಯ ವೇಳೆ ಮಾತನಾಡಿದ ಅವರು, “NEET ಅಕ್ರಮದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೀಡಾಗಿದೆ. ಇಂತಹ ಸೂಕ್ಷ್ಮ ಸನ್ನಿವೇಶದಲ್ಲೂ ಬಿಜೆಪಿ ನಾಯಕರು, ಪ್ರಧಾನ್ ಅವರು ಪಾಕಿಸ್ತಾನದ ವಿರುದ್ಧ ಯುದ್ಧ ಗೆದ್ದು ಬಂದವರಂತೆ ಆಚರಿಸುತ್ತಿರುವುದು ದುರದೃಷ್ಟಕರ” ಎಂದು ತೀವ್ರ ವಾಗ್ದಾಳಿ ನಡೆಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !