Thursday, August 11, 2022

Latest Posts

ಅಮೆರಿಕೆಯ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ ಸರ್ ಎಂ. ವಿಶ್ವೇಶ್ವರಯ್ಯರ ಮೊಮ್ಮಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಮೊಮ್ಮಗಳು ಶೀಲಾ ಮೋಹನ್, ಅಮೆರಿಕದ ಸಿಟಿ ಕೌನ್ಸಿಲ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಬೆಂಗಳೂರಿನಲ್ಲಿ ಜನಿಸಿದ ಶೀಲಾ ಮೋಹನ್, ಆಪಲ್ ಸಂಸ್ಥೆಯ ಕೇಂದ್ರ ಕಚೇರಿಯಿರುವ ಕ್ಯಾಲಿಫೋರ್ನಿಯಾದ ಕ್ಯುಪರ್ಟಿನೋ ನಗರದಿಂದ ಚುನಾವಣೆ ಎದುರಿಸಲು ನಿರ್ಧರಿಸಿದ್ದಾರೆ. ಅವರು ಕಳೆದ 30 ವರ್ಷಗಳಿಂದ ಅಮೆರಿಕಾ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಮೆರಿಕಾದಲ್ಲಿ ಸಿಟಿ ಕೌನ್ಸಿಲ್ ನೀತಿ ನಿರೂಪಣಾ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಅವರು ಇಲ್ಲಿನ ಚುನಾವಣಾ ಅಖಾಡಕ್ಕೆ ಧುಮುಕುತ್ತಿದ್ದಾರೆ.
ಕೆಲದಿನಗಳ ಹಿಂದೆ ಬೆಂಗಳೂರಿಗೆ ಭೇಟಿ ನೀಡಿದ್ದ ಶೀಲಾ, ಸರ್ ಎಂ. ವಿಶ್ವೇಶ್ವರಯ್ಯ ಅವರು ಮಾಜಿ ಪ್ರಧಾನಿ ನೆಹರೂ ಅವರೊಂದಿಗೆ ತೆಗೆಸಿಕೊಂಡಿದ್ದ ಫೋಟೊ ಹಿಡಿದು, ಗತಕಾಲದ ನೆನಪುಗಳನ್ನು ಮೆಲುಕು ಹಾಕಿಕೊಂಡರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss