August 17, 2026
Monday, August 17, 2026
spot_img

ಗಾಂಜಾ ಮಾರಾಟ ಬೇಡ ಎಂದ ಅಜ್ಜಿಯ ಮರ್ಡರ್‌ ಮಾಡಿದ ಮೊಮ್ಮಗ? ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

ಹೊಸದಿಗಂತ ವರದಿ ಶಿವಮೊಗ್ಗ

ಗಾಂಜಾ ಮಾರಾಟ ವಿರೋಧಿಸಿದ ಅಜ್ಜಿಯನ್ನು ಕೊಲೆ ಮಾಡಿರುವ ಆರೋಪ ಹೊತ್ತಿರುವ ಮೊಮ್ಮಗನ ಕಾಲಿಗೆ ಪೊಲೀಸರು ಗುಂಡೇಟು ನೀಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಕೊಲೆ ಆರೋಪಿ ಕಿಶೋರ್ (28) ಕಾಲಿಗೆ ಶಿವಮೊಗ್ಗ ನಗರ ಹೊರವಲಯ ವಾಜಪೇಯಿ ಲೇಔಟ್‌ನಲ್ಲಿ ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ. ತಕ್ಷಣವೇ ದೊಡ್ಡಪೇಟೆ ಇನ್‌ಸ್ಪೆಕ್ಟರ್ ಗಾಳಿಯಲ್ಲಿ ಫೈರ್ ಮಾಡಿ ಆರೋಪಿಗೆ ಎಚ್ಚರಿಕೆ ನೀಡಿದ್ದರು. ಮಾತು ಕೇಳದ ಹಿನ್ನೆಲೆಯಲ್ಲಿ ಕಿಶೋರ್ ಕಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ.

ಸದ್ಯ ಗಾಯಾಳುವನ್ನು ಮೆಗ್ಗಾನ್‌ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಗಣೇಶ್ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !