ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮೊಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದ್ದು, ಇದರ ನಡುವೆ ಇತ್ತ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ (Lal Bahadur Shastri) ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿಯವರು (Vibhakar Shastri) ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರ್ಪಡೆಯಾದರು.

ಪ್ರಧಾನಿ ನರೇಂದ್ರ ಮೋದಿಯವರ (Narendra Modi) ನೇತೃತ್ವದಲ್ಲಿ ಮಾಜಿ ಪ್ರಧಾನಿಯವರ ಕನಸಿನ ಜೈ ಜವಾನ್, ಜೈ ಕಿಸಾನ್ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ಬಿಜೆಪಿಯಲ್ಲಿ ನನ್ನ ಅಜ್ಜ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ದೃಷ್ಟಿಕೋನವನ್ನು ಮುಂದಕ್ಕೆ ಕೊಂಡೊಯ್ಯಲು ನನಗೆ ಅವಕಾಶ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ. ಪಕ್ಷದ ನಾಯಕರ ನಿರ್ದೇಶನದಂತೆ ನಾನು ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಐ.ಎನ್.ಡಿ.ಐ.ಎ ಮೈತ್ರಿಕೂಟಕ್ಕೆ ಯಾವುದೇ ಸಿದ್ಧಾಂತವಿಲ್ಲ ಆದರೆ ಮೋದಿಜಿಯನ್ನು ಸೋಲಿಸುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಸಿದ್ಧಾಂತ ಏನೆಂಬುದನ್ನು ರಾಹುಲ್ ಗಾಂಧಿಯವರು ಹೇಳಬೇಕು ಎಂದು ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನನಗಾಗಿ ಬಿಜೆಪಿಯ ಬಾಗಿಲು ತೆರೆದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ನಡ್ಡಾ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಮತ್ತು ಬ್ರಜೇಶ್ ಪಾಠಕ್ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಅವರು ಹೇಳಿಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!