ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್‌ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಪತ್ರ ಬರೆದಿದ್ದಾರೆ.
ಬೆಂಗಳೂರು ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಂತ್ರಜ್ಞಾನ ಪ್ರಗತಿ ಹಾಗೂ ಬಂಡವಾಳ ಹೂಡಿಕೆ ಆಕರ್ಷಣೆಯ ತಾಣವಾಗಿ ಬೆಳೆಯುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ಮೂಲಕ ಬೆಂಗಳೂರು ಜಾಗತಿಕ ನಗರವಾಗಿ ರೂಪುಗೊಂಡಿದ್ದು, ದೇಶದ ಯುವಕರಿಗೆ ಉದ್ಯೋಗ ಸೃಷ್ಟಿಸಿ, ಆರ್ಥಿಕ ಪ್ರಗತಿಗೆ ನೆರವಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿದ್ದು, ಮುಂಬರುವ ಬಜೆಟ್‌ನಲ್ಲಿ ಈ ಯೋಜನೆಗಳಿಗೆ ಪೂರಕವಾಗಿ ಅನುದಾನ ನೀಡಬೇಕು ಎಂದು ತಿಳಿಸಿದ್ದಾರೆ.