ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್ ಅನ್ನು ಮಂಡಿಸುತ್ತಿದ್ದು, ಗ್ರಾಮ ಪಂಚಾಯಿತಿಗೆ 60 ಲಕ್ಷ ರೂ. ವರೆಗೆ ಅನುದಾನ ನೀಡುವುದಾಗಿ ಘೋಷಿಸಿದ್ದಾರೆ.
ಗ್ರಾಮ ಪಂಚಾಯಿತಿಗೆ 22 ಲಕ್ಷ ರೂ.ನಿಂದ 60 ಲಕ್ಷ ರೂ. ವರೆಗೆ ಅನುದಾನ ನೀಡಲು 780 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ. ರಸ್ತೆ ಹಾಗೂ ಮೂಲಸೌಕರ್ಯ ವೃದ್ಧಿಗಾಗಿ ಈ ಅನುದಾನ ನೀಡಲಾಗುತ್ತದೆ ಎಂಬುದನ್ನು ತಿಳಿಸಿದ್ದಾರೆ.