ದೇಗುಲಗಳಿಗೆ ಮತ್ತೆ ಅನುದಾನ: ತಡೆ ಆದೇಶ ವಾಪಾಸ್ ಪಡೆದ ರಾಜ್ಯ ಸರಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ (Renovation of Temples) ಬಿಡುಗಡೆಯಾದ ಅನುದಾನವನ್ನು ತಡೆ (Temple Grant Stopped) ಹಿಡಿದಿದ್ದ ಮುಜರಾಯಿ ಇಲಾಖೆ (Muzrai Department) ಇದೀಗ ತನ್ನ ಆದೇಶವನ್ನು ವಾಪಸ್‌ ಪಡೆದಿದೆ.

ದೇವಸ್ಥಾನಗಳ ಅನುದಾನಕ್ಕೇ ಕತ್ತರಿ ಹಾಕಿದೆ ಎಂಬ ಆಕ್ರೋಶ ಭುಗಿಲೆದ್ದ ಬೆನ್ನಿಗೆ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್‌ ಪಡೆದಿದೆ. ಸ್ವತಃ ಮುಜರಾಯಿ ಮಂತ್ರಿ ರಾಮಲಿಂಗಾ ರೆಡ್ಡಿ (Ramalinga reddy) ಅವರೇ ಸ್ಪಷ್ಟಪಡಿಸಿದ್ದಾರೆ.

ಮುಜರಾಯಿ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲ ಜಿಲ್ಲಾಡಳಿತಗಳಿಗೆ ಆದೇಶವೊಂದನ್ನು ಹೊರಡಿಸಿ ಮೂರು ಅಂಶಗಳನ್ನು ಗಮನಿಸಿ ಅನುದಾನ ವಾಪಸ್‌ಗೆ ಸೂಚಿಸಿದ್ದರು.

2022-23ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ, ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡಬಾರದು.
ಶೇ‌. 50ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ತಕ್ಷಣ ಅನುದಾನ ತಡೆ ಹಿಡಿಯಬೇಕು
ಅನುದಾನದ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯಬೇಕು. ಎಂಬ ಮೂರು ವಿಚಾರಗಳನ್ನು ಪ್ರಸ್ತಾಪಿಸಿ ಜೀರ್ಣೋದ್ಧಾರ ಎನ್ನುವ ಮೂರು ವಿಷಯಗಳನ್ನು ಪ್ರಸ್ತಾಪಿಸಿ ದೇವಸ್ಥಾನಗಳ ಜೀರ್ಣೋದ್ಧಾರ ಅನುದಾನ ಬಿಡುಗಡೆ ತಡೆಹಿಡಿಯಲು ಸೂಚಿಸಲಾಗಿತ್ತು.

ದೇಗುಲಗಳ ಅನುದಾನ ವಾಪಸ್‌ ಆದೇಶದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಪ್ರತಿಕ್ರಿಯಿಸಿದ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ, ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್ ಪಡೆಯುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

ಮುಜರಾಯಿ ಇಲಾಖೆ ಆಯುಕ್ತರು ಸ್ವಲ್ಪ ಗೊಂದಲಕ್ಕೊಳಗಾಗಿ ಆದೇಶ ಹೊರಡಿಸಿದ್ದಾರೆ. ದೇವಾಲಯಗಳ ಕಾಮಗಾರಿಯ ಪ್ರಗತಿ ಬಗ್ಗೆ ವರದಿ ಪಡೆಯುವಂತೆ ಸೂಚಿಸಲಾಗಿತ್ತು. ಸ್ಟೇಟಸ್‌ ರಿಪೋರ್ಟ್‌ ಕೇಳಿದ್ದಕ್ಕೆ ಸ್ಟೇ ಆರ್ಡರ್‌ ಕೊಟ್ಟಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ದೇವಾಲಯಗಳಿಗೆ ಅನುದಾನ ನೀಡುವ ವಿಚಾರದಲ್ಲಿ ಅಕ್ರಮ ನಡೆದಿದೆ ಎನ್ನುವ ಬಗ್ಗೆ ಯಾವುದೇ ಅನುಮಾನ ಇಲ್ಲ. ಆದರೆ, ಸದ್ಯಕ್ಕೆ ಯಾವ ದೇವಸ್ಥಾನದ ಕೆಲಸವನ್ನೂ ನಿಲ್ಲಿಸುವುದಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸಚಿವರ ಸೂಚನೆಯಂತೆಯೇ ಆಯುಕ್ತರು ತಮ್ಮ ಹಿಂದಿನ ಆದೇಶವನ್ನು ಹಿಂಪಡೆದಿರುವ ಸುತ್ತೋಲೆಯನ್ನು ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!