ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪರಿಸರ ಸಂರಕ್ಷಣೆಗೆ ‘ಮಹಾ’ ಸರಕಾರ ಒತ್ತು: 50 ವರ್ಷ ಹಳೆಯ ಮರಗಳಿಗೆ ಪಾರಂಪರಿಕ ಸ್ಥಾನಮಾನ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪರಿಸರ ಸಂರಕ್ಷಣೆಗೆ ಒತ್ತು ನೀಡುವ ವಿನೂತನ ಕ್ರಮವಾಗಿ ಮುಂಬೈ ನಗರದ 50 ವರ್ಷ ಹಳೆಯದಾದ ಮರಗಳಿಗೆ ಪಾರಂಪರಿಕ ಸ್ಥಾನಮಾನ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
ಅದಕ್ಕಾಗಿ 1975ರ ಮಹಾರಾಷ್ಟ್ರ (ನಗರ ಪ್ರದೇಶ) ಮರಗಳ ಉಳಿವು ಮತ್ತು ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಉದ್ದೇಶಿಸಿದೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯು ‘ಮಹಾರಾಷ್ಟ್ರ ಮರಗಳ ಪ್ರಾಧಿಕಾರ’ವನ್ನು ರಚಿಸುವ ಪ್ರಸ್ತಾವಕ್ಕೂ ಅನುಮೋದನೆಯನ್ನು ನೀಡಲಾಗಿದ್ದು, ಪರಿಸರ ಪ್ರೇಮಿ ಮತ್ತು ಛಾಯಾಗ್ರಾಹಕರೂ ಆಗಿರುವ ಉದ್ಧವ್‌ ಠಾಕ್ರೆ ಮತ್ತು ಅವರ ಪುತ್ರ, ಪರಿಸರ ಸಚಿವ ಆದಿತ್ಯ ಠಾಕ್ರೆ ಈ ತಿದ್ದುಪಡಿ ಕುರಿತಂತೆ ಪ್ರಮುಖವಾದ ಪಾತ್ರವಹಿಸಿದ್ದಾರೆ.
ರಾಜ್ಯದಲ್ಲಿ ನಗರ ಪ್ರದೇಶಗಳನ್ನು ಹಸಿರೀಕರಣ ಮಾಡುವ ಉದ್ದೇಶದಿಂದ ಕಾಯ್ದೆಗೆ ತಿದ್ದುಪಡಿ ತಲಾಗಿದೆ. ಇದರಿಂದ ನಾವು ನಗರ ಪ್ರದೇಶದಲ್ಲಿ ಇರುವ ಹಳೆಯ ಮರಗಳನ್ನು ರಕ್ಷಿಸುವುದು ಸಾಧ್ಯವಾಗಲಿದೆ ಎಂದು ಸಚಿವ ಆದಿತ್ಯ ಠಾಕ್ರೆ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss