‘ಮಹಾ ಹೈಡ್ರಾಮಾ’: ಅನರ್ಹತೆ​ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಏಕನಾಥ ಶಿಂದೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮಹಾರಾಷ್ಟ್ರದ ಬಂಡಾಯ ಶಾಸಕರಿಗೆ ಅನರ್ಹತೆಯ ನೋಟಿಸ್​ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಏಕನಾಥ ಶಿಂದೆ ಸುಪ್ರೀಂಕೋರ್ಟ್​​ ಮೆಟ್ಟಿಲೇರಿದ್ಧಾರೆ.
ಇದರ ಜೊತೆಗೆ ತಮ್ಮ ಬದಲಿಗೆ ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕರಾಗಿ ಬೇರೆಯವನ್ನು ನೇಮಿಸಿರುವುದನ್ನೂ ಪ್ರಶ್ನಿಸಲಾಗಿದೆ.

ನಾಳೆ ಈ ಪ್ರಕರಣದ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಲಾಗಿದೆ.

ಏಕನಾಥ್ ಶಿಂಧೆ ಅವರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಅನರ್ಹಗೊಳಿಸಿದ ತೀರ್ಪಿನ ವಿರುದ್ಧ ಬಂಡಾಯ ಶಾಸಕರು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದಾರೆ. ಸುನೀಲ್ ಪ್ರಭು ಅವರನ್ನ ಮುಖ್ಯ ಸಚೇತಕರನ್ನಾಗಿ ನೇಮಿಸಿದ್ದನ್ನೂ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ಮೂಲಕ ಶಿಂಧೆ ಬಣ ನೇರವಾಗಿ ವಿಧಾನಸಭೆಯ ಡೆಪ್ಯುಟಿ ಸ್ಪೀಕರ್ ಡೊಮೈನ್ ಪ್ರದೇಶವನ್ನು ಪ್ರಶ್ನಿಸಿದೆ.

ಮಹಾ ವಿಕಾಸ್ ಆಘಾಡಿ ಸರ್ಕಾರದ ವಿರುದ್ಧ ಏಕನಾಥ ಶಿಂದೆ ನೇತೃತ್ವದಲ್ಲಿ ಬಂಡಾಯ ಎದ್ದಿರುವ ಶಿವಸೇನೆಯ 16 ಜನ ಶಾಸಕರಿಗೆ ಮಹಾರಾಷ್ಟ್ರ ಉಪ ಸ್ಪೀಕರ್​ ನರಹರಿ ಜಿರ್ವಾಲ್ ಅನರ್ಹತೆಯ ನೋಟಿಸ್ ಜಾರಿ ಮಾಡಿದ್ದರು. ಅಲ್ಲದೇ, ಜೂನ್​ 27ರೊಳಗೆ ಉತ್ತರಿಸುವಂತೆ ಸೂಚಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!