‘ಮಹಾ’ ರಾಜಕೀಯ ಹೈಡ್ರಾಮಾ: ಜು 20ರಂದು ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾಕ್ಕೆ ಜುಲೈ 20ರಂದು ಸುಪ್ರೀಂಕೋರ್ಟ್​ನಲ್ಲಿ ಅಂತ್ಯ ಹಾಡುವ ಲಕ್ಷಣಗಳು ಕಾಣುತ್ತಿದೆ.
ಹೌದು, ಶಿವಸೇನೆ ಶಾಸಕರ ಅನರ್ಹತೆ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜುಲೈ 20ರಂದು ಕೈಗೆತ್ತಿಕೊಳ್ಳಲಿದೆ. ಆ ದಿನ ಈ ರಾಜಕೀಯ ಆಟ ಮುಗಿಯು ಲಕ್ಷಣ ಗೋಚರಿಸುತ್ತಿದೆ.
ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ನೇತೃತ್ವದ ಮೈತ್ರಿಕೂಟದ ಸರ್ಕಾರದ ವಿರುದ್ಧ ಶಿವಸೇನೆಯ ಪ್ರಬಲ ನಾಯಕ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್​ ಶಿಂದೆ ಬಣದ ಶಾಸಕರು ಬಂಡಾಯ ಸಾರಿದ್ದರು. ಹೀಗಾಗಿ ಮುಖ್ಯಮಂತ್ರಿಯಾಗಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್​ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸರ್ಕಾರ ಪತನವಾಗಿತ್ತು.
ಬಳಿಕ ತಮ್ಮ ವಿರುದ್ಧ ಬಂಡಾಯ ಸಾರಿದ್ದ ಶಾಸಕರ ಅನರ್ಹತೆಗಾಗಿ ಶಿವಸೇನೆಯ ಉದ್ಧವ್​ ಠಾಕ್ರೆ ಬಣ ಅಂದಿನ ಉಪ ಸ್ಪೀಕರ್​ ಮೂಲಕ ನೋಟಿಸ್​ ಜಾರಿ ಮಾಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಏಕನಾಥ್​ ಶಿಂದೆ ಬಣ ಸುಪ್ರೀಂಕೋರ್ಟ್​ ಮೊರೆ ಹೋಗಿದೆ. ಅಲ್ಲದೇ, ಮೂಲ ಶಿವಸೇನೆ ನಮ್ಮದೇ ಆಗಿದ್ದು, ಉದ್ಧವ್​ ಬಣದ ಶಾಸಕರನ್ನು ಅನರ್ಹಗೊಳಿಸಬೇಕೆಂದು ಶಿಂದೆ ಬಣ ಕೋರಿದೆ. ಇತ್ತ, ಉದ್ಧವ್​ ಬಣವು ಶಿಂದೆ ನೇತೃತ್ವದ ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ಕೊಟ್ಟಿರುವುದನ್ನು ಪ್ರಶ್ನಿಸಿದೆ.
ಈ ಎರಡು ಬಣಗಳ ಅರ್ಜಿಗಳುಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ನೇತೃತ್ವದ ನ್ಯಾಯ ಪೀಠ ವಿಚಾರಣೆ ನಡೆಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!