ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮಹಿಳೆಯರು ಯೋಜನೆಯ ಲಾಭ ಪಡೆಯಲು ಉತ್ಸುಕರಾಗಿದ್ದು, ಒಂದೇ ವಾರದಲ್ಲಿ ಬರೋಬ್ಬರಿ 70 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ.
ಈ ಹಿಂದೆ ಮೊಬೈಲ್‌ಗೆ ಮೆಸೇಜ್ ಬಂದ ನಂತರ ಕೇಂದ್ರಗಳಿಗೆ ತೆರಳಿ ಜನರು ನೋಂದಣಿ ಮಾಡಿಸಿಕೊಳ್ಳುತ್ತಿದ್ದರು, ಇದೀಗ ನೋಂದಣಿಗೆ ಮೊಬೈಲ್‌ನಲ್ಲಿ ಮೆಸೇಜ್ ಬರುವ ಅವಶ್ಯಕತೆ ಇಲ್ಲ. ಅದಿಲ್ಲದೆಯೇ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.
ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಇದರ ಜತೆಗೆ ನೋಂದಣಿಗೆ ಅಧಿಕಾರಿಗಳು ಹಣ ಕೇಳುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಯಾರಾದರೂ ಹಣ ಪಡೆದರೆ ಸ್ಥಳೀಯ ಠಾಣೆಗೆ ದೂರು ಸಲ್ಲಿಸಬೇಕು ಎಂದು ಸರ್ಕಾರ ತಿಳಿಸಿದೆ.