‘ಮಹಾ ತೀರ್ಪು’ ಪ್ರಕಟ: ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದ ‘ಕಮಲ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಐತಿಹಾಸಿಕ ಗೆಲುವಿಗೆ ಏಕನಾಥ್ ಶಿಂಧೆ ಸಂತಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮಹಾರಾಷ್ಟ್ರದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಮಹಾಯುತಿ ಮೈತ್ರಿಕೂಟದ ಐತಿಹಾಸಿಕ ವಿಜಯಕ್ಕಾಗಿ ಮಹಾರಾಷ್ಟ್ರದ ಜನತೆಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಬಿಜೆಪಿ-ಮಹಾಯುತಿ ನಿರಂತರವಾಗಿ ಅಭಿವೃದ್ಧಿಗೆ ಆದ್ಯತೆ ನೀಡಿದೆ ಎಂದು ತಿಳಿಸಿದ್ದಾರೆ.

ಈ ಮಹೋನ್ನತ ಸಾಧನೆಗಾಗಿ ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ಜಿ.ಪಿ.ನಡ್ಡಾ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಮತ್ತು ಅಜಿತ್‌ ಪವಾರ್‌ ಅವರು ಮತ್ತು ಬಿಜೆಪಿ ನಾಯಕರು ಹಾಗೂ ಮಹಾಯುತಿ ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!