ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಸುಗಮ ಮತ ಎಣಿಕೆಗೆ ಎಲ್ಲೆಡೆ ಸಿದ್ಧತೆ ನಡೆದಿದೆ.
ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ ಮಹಾಯುತಿ ಸರ್ಕಾರ ಮತ್ತೆ ಬರಲಿದೆ. ಆದರೆ, ಕಾಂಗ್ರೆಸ್ ಇದನ್ನು ನಂಬಲು ರೆಡಿ ಇಲ್ಲ. ಇಂದು ಬೆಳಗ್ಗೆ ಟ್ರೆಂಡ್ ನೋಡಿಕೊಂಡು ಗೆಲ್ಲುವ ಅಭ್ಯರ್ಥಿಗಳನ್ನು ರಕ್ಷಿಸಿಕೊಳ್ಳಲು ಹೈಕಮಾಂಡ್ ಪ್ಲಾನ್ ಮಾಡಿದೆ. ಉದ್ಧವ್ ಠಾಕ್ರೆ ಕೂಡ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ.
ಇನ್ನು, ಜಾರ್ಖಂಡ್‌ನಲ್ಲಿ ಯಾರೂ ಬೇಕಿದ್ರೂ ಗೆಲ್ಲಬಹುದು ಎಂದು ಎಕ್ಸಿಟ್ ಪೋಲ್‌ಗಳ ಸಮೀಕ್ಷೆಗಳು ಹೇಳ್ತಿವೆ.
ಫಲಿತಾಂಶ ಎಲ್ಲಿ ನೋಡಬಹುದು?
ವಿಶ್ವಾಸಾರ್ಹ ಸುದ್ದಿ ಮೂಲಗಳಿಂದ ಲೈವ್ ಅಪ್‌ಡೇಟ್‌ಗಳು ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಫಲಿತಾಂಶಗಳನ್ನು ಟ್ರ್ಯಾಕ್ ಮಾಡಬಹುದು. ಭಾರತೀಯ ಚುನಾವಣಾ ಆಯೋಗದ (ECI) ವೆಬ್‌ಸೈಟ್ ಸೇರಿದಂತೆ ಎಲ್ಲಾ ಪ್ರಮುಖ ಸುದ್ದಿ ವಾಹಿನಿಗಳಲ್ಲಿ ಫಲಿತಾಂಶಗಳು ಲಭ್ಯವಿರುತ್ತವೆ.