ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ಬೆಂಗಳೂರು ಪ್ರಾಧಿಕಾರವು “ಭಾರತೀಯ ಕಾಂಕ್ರೀಟ್ ಸಂಸ್ಥೆ ಅಲ್ಟ್ರಾಟೆಕ್ ಪ್ರಶಸ್ತಿಗೆ ಭಾಜನವಾಗಿದೆ.
ಬೆಂಗಳೂರು ನಗರದ ಕೊರಮಂಗಲ ಪ್ರದೇಶದ 1ನೇ ಕ್ರಾಸ್ ಎಂಪೈರ್ ರಸ್ತೆ ಮತ್ತು 7ನೇ ಕ್ರಾಸ್ ರಸ್ತೆಗಳಲ್ಲಿ ಅನುಷ್ಠಾನಗೊಳಿಸಲಾದ ಥಿನ್ ವೈಟ್ ಟಾಪಿಂಗ್ ಕಾಮಗಾರಿ ವಿನ್ಯಾಸ ಮತ್ತು ಅನುಷ್ಠಾನಕ್ಕೆ ಈ ಗೌರವ ಸಂದಿದೆ.
ಬೆಂಗಳೂರು ನಗರದಲ್ಲಿ ವೈಟ್ ಟಾಪಿಂಗ್ ರಸ್ತೆಗಳಿಗೆ 180 ಎಂ.ಎಂ ದಪ್ಪವಿರುವ ವಿನ್ಯಾಸ ಬಳಸಲಾಗುತ್ತಿತ್ತು. ಹೊಸ ಯೋಜನೆಯಲ್ಲಿ, ಜಿಬಿಎಯ ಅಭಿಯಂತರರ ತಂಡವು 125 ಮಿಮೀ ದಪ್ಪದ ಹೊಸ ವಿನ್ಯಾಸವನ್ನು ಯಶಸ್ವಿಯಾಗಿ ರೂಪಿಸಿ ಜಾರಿಗೊಳಿಸಿದೆ. ಈ ವಿನ್ಯಾಸವು ರಸ್ತೆಗಳ ಎತ್ತರ, ಮಳಿಗೆಗಳು ಹಾಗೂ ನಿವಾಸಗಳ ಪ್ರವೇಶ ಮತ್ತು ಮಳೆಯ ನೀರಿನ ಹರಿವಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಇದು ಪರಿಹಾರವಾಗಿದೆ. ಜೊತೆಗೆ ಈ ಯೋಜನೆ ಅನುಷ್ಠಾನದಿಂದ ಹಣದ ಉಳಿತಾಯವೂ ಆಗಲಿದೆ.