ಪ್ರಧಾನಮಂತ್ರಿಗಳ ಕಾರ್ಯಕ್ರಮದಲ್ಲಿ ರೈತ ಮಹಿಳೆಯರಿಗೆ ಹೆಚ್ಚಿನ ಒತ್ತು

ಹೊಸದಿಗಂತ ವರದಿ ಬೆಳಗಾವಿ:

ರೋಡ್ ಶೋ ಮಾರ್ಗ ಇನ್ನೂ ಅಂತಿಮಗೊಂಡಿಲ್ಲ, ಎಸ್.ಪಿ.ಜಿ. ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದೆಂದು
ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ ಪರಿಶೀಲಿಸಿ ಅವರು ಮಾತನಾಡಿದರು.

ಪಿಎಂ-ಕಿಸಾನ್ ರೈತರ ಯೋಜನೆಯಾಗಿದೆ. ಕೃಷಿಯಲ್ಲಿ ರೈತ ಮಹಿಖೆಯರ ಪಾತ್ರ ದೊಡ್ಡದು. ಆದ್ದರಿಂದ ರೈತ ಮಹಿಳೆಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲಾಗುವುದು ಎಂದು ತಿಳಿಸಿದರು.

ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ, ಅನಿಲ್ ಬೆನಕೆ, ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ್ ಘಾಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!