ಬಿರಿಯಾನಿ ಸರ್ವ್‌ ಮಾಡೋದು ತಡವಾಗಿದ್ದಕ್ಕೆ ರೆಸ್ಟೋರೆಂಟ್‌ ಸಿಬ್ಬಂದಿ ಮೇಲೆ ಹಲ್ಲೆ: ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿರಿಯಾನಿ ತರಲು ತಡಮಾಡಿದ್ದಕ್ಕೆ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಕಳೆದ ಬುಧವಾರ ಗ್ರೇಟರ್ ನೋಯ್ಡಾ ಪ್ರದೇಶದಲ್ಲಿ ನಡೆದಿದೆ. ಪೊಲೀಸರು ಬಹಿರಂಗಪಡಿಸಿದ ವಿವರಗಳ ಪ್ರಕಾರ, ಗ್ರೇಟರ್ ನೋಯ್ಡಾದ ಅನ್ಸಲ್ ಮಾಲ್‌ನಲ್ಲಿ ಜೋಕ್ ಹೆಸರಿನ ರೆಸ್ಟೋರೆಂಟ್ ಮೂವರು ವ್ಯಕ್ತಿಗಳು ಬಂದು ಬಿರಿಯಾನಿ ಆರ್ಡರ್‌ ಮಾಡಿದ್ದಾರೆ. ಆರ್ಡರ್‌ ಮಾಡಿದ ಪದಾರ್ಥ ತರಲು ಸ್ವಲ್ಪ ತಡವಾಗಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಕೌಂಟರ್‌ನಲ್ಲಿದ್ದ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿಸಿರುವ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರೆಸ್ಟೋರೆಂಟ್‌ನಿಂದ ಆಚೆ ಎಳೆದೊಯ್ದ ಬಳಿಕ ಯುವಕನ ಮೇಲೆ ಉಳಿದ ಇಬ್ಬರೂ ದಾಳಿ ನಡೆಸಿದರು. ಘಟನೆ ಕುರಿತು ಯುವಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!