Tuesday, March 28, 2023

Latest Posts

ಭೀಕರ ರೈಲು ಅಪಘಾತ: 16 ಮಂದಿ ಸಾವು, 85ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳವಾರ ತಡರಾತ್ರಿ ಗ್ರೀಸ್‌ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿಯಾಗಿ ಹದಿನಾರು ಮಂದಿ ಸಾವನ್ನಪ್ಪಿ, ಕನಿಷ್ಠ 85 ಮಂದಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳ ತಿಳಿಸಿದೆ. ಅಥೆನ್ಸ್‌ನಿಂದ ಉತ್ತರದ ನಗರವಾದ ಥೆಸಲೋನಿಕಿಗೆ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ರೈಲು ಮತ್ತು ಥೆಸಲೋನಿಕಿಯಿಂದ ಲಾರಿಸ್ಸಾಗೆ ಸರಕು ರೈಲು ಮಧ್ಯ ಗ್ರೀಸ್‌ನ ಲಾರಿಸ್ಸಾ ನಗರದ ಹೊರಗೆ ಡಿಕ್ಕಿ ಹೊಡೆದಿದೆ ಎಂದು ಥೆಸಲಿ ಪ್ರದೇಶದ ಗವರ್ನರ್ ಹೇಳಿದ್ದಾರೆ.

ಪ್ಯಾಸೆಂಜರ್‌ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿದ್ದು, ಮೊದಲ ಎರಡು ಬೋಗಿಗಳು ಸಂಪೂರ್ಣವಾಗಿ ನಾಶವಾಗಿವೆ. ಸುಮಾರು 250 ಪ್ರಯಾಣಿಕರನ್ನು ಬಸ್‌ಗಳಲ್ಲಿ ಥೆಸಲೋನಿಕಿಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಮುರಿದ ಕಿಟಕಿಗಳು ಮತ್ತು ದಟ್ಟವಾದ ಹೊಗೆಯಿಂದ ಪ್ರದೇಶ ಪೂರ್ತಿ ಭೀಕರ ದೃಶ್ಯಕ್ಕೆ ಸಾಕ್ಷಿಯಾಯಿತು. ಸಿಕ್ಕಿಬಿದ್ದ ಪ್ರಯಾಣಿಕರನ್ನು ಹುಡುಕುತ್ತಿರುವ ರಕ್ಷಣಾ ಕಾರ್ಯಕರ್ತರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ದೃಶ್ಯವೂ ಕಂಡುಬಂದಿದೆ.

ಬುಧವಾರ ಮುಂಜಾನೆ ರಕ್ಷಣಾ ಸಿಬ್ಬಂದಿ ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. “ಎರಡು ರೈಲುಗಳ ಘರ್ಷಣೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರನ್ನು ಸ್ಥಳಾಂತರಿಸುವ ಕಾರ್ಯವು ತುಂಬಾ ಕಷ್ಟಕರವಾಗಿದೆ” ಎಂದು ಅಗ್ನಿಶಾಮಕ ದಳದ ವಕ್ತಾರ ವಾಸಿಲಿಸ್ ವರ್ತಕೋಗಿಯಾನಿಸ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!