ಆರೋಗ್ಯಕರ ಜೀವನ ಶೈಲಿಗೆ ಆಹಾರ ಪದ್ಧತಿಯಲ್ಲಿ ಸರಿಯಾದ ಆಯ್ಕೆ ತುಂಬಾ ಮುಖ್ಯ. ಸಾಮಾನ್ಯವಾಗಿ ಅಡುಗೆಯ ರುಚಿಗಾಗಿ ಬಳಸುವ ಹಸಿಮೆಣಸಿನಕಾಯಿ ಕೇವಲ ಸ್ವಾದ ಹೆಚ್ಚಿಸುವುದಲ್ಲದೆ ಅನೇಕ ಪೌಷ್ಟಿಕಾಂಶಗಳ ಭಂಡಾರವಾಗಿದೆ. ಅಡುಗೆಗೆ ಸೊಗಸು ನೀಡುವುದರ ಜೊತೆಗೆ ದೇಹಕ್ಕೆ ಬೇಕಾದ ವಿಟಮಿನ್ ಹಾಗೂ ಆ್ಯಂಟಿಆಕ್ಸಿಡೆಂಟ್‌ಗಳನ್ನು ಒದಗಿಸುತ್ತದೆ. ವೈದ್ಯಕೀಯ ದೃಷ್ಟಿಯಿಂದಲೂ ಹಸಿಮೆಣಸಿನಕಾಯಿಯನ್ನು ನಿಯಮಿತವಾಗಿ ಆಹಾರದಲ್ಲಿ ಸೇರಿಸುವುದರಿಂದ ಹಲವಾರು ರೋಗ ನಿರೋಧಕ ಶಕ್ತಿ ಬೆಳೆಸಬಹುದು.
ಹಸಿಮೆಣಸಿನಕಾಯಿಯಲ್ಲಿ ವಿಟಮಿನ್ ಎ ಅಧಿಕವಾಗಿದ್ದು, ಇದು ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸುತ್ತದೆ. ವಿಟಮಿನ್ ಸಿ ಹೆಚ್ಚಿರುವುದರಿಂದ ದೇಹದಲ್ಲಿ ಸೋಂಕು ತಡೆಯುವ ಸಾಮರ್ಥ್ಯ ಹೆಚ್ಚುತ್ತದೆ.
ಹಸಿಮೆಣಸಿನಕಾಯಿಯಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ಚರ್ಮದ ಮೇಲೆ ಬರುವ ಸುಕ್ಕುಗಳನ್ನು ಕಡಿಮೆ ಮಾಡಿ, ಚರ್ಮ ಕಂಗೊಳಿಸುವಂತೆ ಮಾಡುತ್ತದೆ.
ಹಸಿಮೆಣಸಿನಕಾಯಿ ತಿನ್ನುವುದರಿಂದ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವುದು ತಡೆಯಲಾಗುತ್ತದೆ. ಇದರಿಂದ ದೇಹದ ಎಲ್ಲಾ ಅಂಗಗಳಿಗೆ ಸರಿಯಾದ ರಕ್ತ ಪರಿಚಲನೆ ಸಿಗುತ್ತದೆ.
ಹಸಿರು ಮೆಣಸಿನಕಾಯಿಯನ್ನು ಸೇವಿಸಿದಾಗ ಎಂಡಾರ್ಫಿನ್ ಹಾರ್ಮೋನ್‌ಗಳು ಬಿಡುಗಡೆಯಾಗಿ, ಒತ್ತಡ ಕಡಿಮೆಯಾಗುತ್ತದೆ ಮತ್ತು ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಹಸಿಮೆಣಸಿನಕಾಯಿಯಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ಕ್ಯಾನ್ಸರ್ ಅಪಾಯವನ್ನು ತಡೆಗಟ್ಟುವಲ್ಲಿ ಸಹಕಾರಿ. ವಿಶೇಷವಾಗಿ ಪುರುಷರಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.
ಹಸಿಮೆಣಸಿನಕಾಯಿ ದೇಹದ ಕೊಬ್ಬನ್ನು ಕರಗಿಸಲು ನೆರವಾಗುತ್ತದೆ. ನಿಯಮಿತ ಸೇವನೆಯಿಂದ ತೂಕ ನಿಯಂತ್ರಣದಲ್ಲಿರಲು ಸಹಕಾರಿ.