ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ಕು ಕ್ಷೇತ್ರದಲ್ಲಿ ಹಸಿರು ಕ್ರಾಂತಿ ಮಾಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸಾದ `ಸಾಂಸ್ಥಿಕ ರಚನೆಗಳ ವೈಜ್ಞಾನಿಕ ವರ್ಗೀಕರಣ’ ವರದಿಯನ್ನು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅನಾವರಣಗೊಳಿಸಿದ್ದಾರೆ.
ದೆಹಲಿಯ ವಿಜ್ಞಾನ ಭವನದಲ್ಲಿ ಉಕ್ಕು ಸಚಿವಾಲಯ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪರಿಸರಪೂರಕವಾದ ಗ್ರೀನ್ ಸ್ಟೀಲ್ ತಯಾರಿಕೆಗೆ ಪ್ರಾಮುಖ್ಯತೆ ನೀಡಲು ವರದಿಯನ್ನು ಬಿಡುಗಡೆಗೊಳಿಸಿದರು.
ಇದು ದೇಶದ ಅತ್ಯಂತ ಪ್ರಮುಖ ಉದ್ಯಮಗಳಲ್ಲಿ ಒಂದಾದ ಉಕ್ಕು ಉದ್ಯಮದ ಸುಸ್ಥಿರತೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಟ್ಯಾಕ್ಸಾನಮಿ ಬಿಡುಗಡೆಯು ಒಂದು ಐತಿಹಾಸಿಕ ಹೆಜ್ಜೆ ಎಂದು ನಾನು ಹೇಳಬಯಸುತ್ತೇನೆ ಎಂದು HDK ಹೇಳಿದ್ದಾರೆ.