ಗೊಂದಲಕ್ಕೆ ತೆರೆ: 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ 5, 8, 9,11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿ ಇಂದು ವಿಚಾರಣೆ ನಡೆಸಿದ ವಿಭಾಗೀಯ ಪೀಠವು, ಮಹತ್ವದ ತೀರ್ಪು ಪ್ರಕಟಿಸಿ ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಎಳೆದಿದೆ.
ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8, 9,11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಇತ್ತೀಚೆಗೆ ರದ್ದುಪಡಿಸಿ ಆದೇಶ ನೀಡಿತ್ತು. ಬಳಿಕ ಪರೀಕ್ಷೆ ರದ್ದಾಗುತ್ತದೆಯೇ, ಇಲ್ಲವೇ ಎಂಬ ಕುರಿತಾಗಿ ಗೊಂದಲ ಮುಂದುವರೆದಿದ್ದು, ಮಕ್ಕಳು ಮತ್ತು ಪೋಷಕರ ಗೊಂದಲಕ್ಕೊಳಗಾಗಿದ್ದರು. ಈ ಗೊಂದಲಕ್ಕೆ ಈಗ ತೆರೆಬಿದ್ದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!