ಕಳಸಾ-ಬಂಡೂರಿ ಯೋಜನೆಗೆ ಗ್ರೀನ್ ಸಿಗ್ನಲ್: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹೊಸದಿಗಂತ ವರದಿ ಹುಬ್ಬಳ್ಳಿ:

ಉತ್ತರ ಕರ್ನಾಟಕ ಭಾಗಕ್ಕೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಮಹತ್ತರ ಯೋಜನೆಯಾದ ಕಳಸಾ, ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರದಿಂದ ವಿಸ್ತೃತ ಯೋಜನಾ ವರದಿಗೆ(ಡಿಪಿಆರ್) ಅನುಮತಿ ದೊರೆತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಉತ್ತರ ಕರ್ನಾಟಕದ ಕಿತ್ತೂರ, ಹು-ಧಾ, ನವಲಗುಂದ, ನರಗುಂದ ಹಾಗೂ ಗದಗ ಜಿಲ್ಲೆಗೆ ಬಹಳ ಅತ್ಯವಶ್ಯವಾದ ಯೋಜನೆಯಾಗಿತ್ತು. ಕಳಸಾ ಬಂಡೂರಿ ಕುಡಿಯುವ ನೀರಿನ ಸಲುವಾಗಿ ಈ ಭಾಗದ ಜನರು ಹಾಗೂ ನಾವು ಸಹ ಹಲವಾರು ವರ್ಷದಿಂದ ಹೋರಾಟ ಮಾಡಿದ್ದೇವೆ ಎಂದರು.

ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಈ ಭಾಗದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಮುಂದಾಗಲಿಲ್ಲ. ಬಿಜೆಪಿ ಸರ್ಕಾರ ಅಕಾರಕ್ಕೆ ಬಂದ ಬಳಿಕ ಟ್ರಿಮಿನಲ್‌ಗೂ ಸಹ ದೊರೆಕಿತ್ತು. ಆದರೆ ಯೋಜನೆಯ ಕಾಮಗಾರಿ ಆರಂಭಿಸಲು ಡಿಪಿಆರ್‌ಗೆ ಅನುಮತಿ ಬೇಕಾಗಿತ್ತು. ಪಧಾನಿ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಡಿಪಿಆರ್ ನೀಡಿದೆ. ಆದರಿಂದ ಮೋದಿ ಅವರಿಗೆ ಹಾಗೂ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರಶೇಖಾವತ್ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವೂ ಹೆಚ್ಚು ಜವಾಬ್ದಾರಿಯಿಂದ ಉತ್ತಮ ಡಿಪಿಆರ್ ಕಳುಹಿಸಿ ಹಾಗೂ ಕೇಂದ್ರ ಸರ್ಕಾರಕ್ಕೆ ಯೋಜನೆಯ ಬಗ್ಗೆ ಮನವರಿಕೆ ಮಾಡಿಕೊಟ್ಟಿದೆ. ಆದರಿಂದ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಉತ್ತಮ ಕಾರ್ಯ ಮಾಡಿದೆ. ಆದರಿಂದ ಬಸವರಾಜ ಬೊಮ್ಮಾಯಿ ಹಾಗೂ ಜಲಸಂಪನ್ಮೂಲ ಸಚಿವ ಗೋಂವಿದ ಕಾರಜೋಳ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!