ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಧಾರವಾಡ-ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಹೆಚ್ಚುವರಿ ನಿಲುಗಡೆಗೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಹಸಿರು ನಿಶಾನೆ ತೋರಿಸಿದರು.
ಈ ಸಂದರ್ಭ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಎಸ್. ಬೊಮ್ಮಾಯಿ ಮತ್ತು ಬ್ಯಾಡಗಿ ಶಾಸಕ ಬಸವರಾಜ ನೀಲಪ್ಪ ಶಿವಣ್ಣನವರ್ ಉಪಸ್ಥಿತರಿದ್ದರು.
ಬಸವರಾಜ ಬೊಮ್ಮಾಯಿ ಅವರು ತಮ್ಮ ಭಾಷಣದಲ್ಲಿ, ಹಾವೇರಿಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ ನೀಡಿದ ಕುರಿತು ಸೋಮಣ್ಣ ಅವರಿಗೆ ಧನ್ಯವಾದ ತಿಳಿಸಿದರು.