ಗ್ರೀನ್ ಅಜೇಯ ಶತಕದ ಆಟ: ಗೆದ್ದು ಸಂಭ್ರಮಿಸಿದ ಮುಂಬೈ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂಬೈ ಇಂಡಿಯನ್ಸ್‌ ತಂಡವು ತನ್ನ ಪಾಲಿನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಎದುರು 8 ವಿಕೆಟ್‌ ಭರ್ಜರಿ ಜಯ ಸಾಧಿಸಿದೆ.

ಕ್ಯಾಮರೋನ್ ಗ್ರೀನ್ ಬಾರಿಸಿದ ಅಜೇಯ ಶತಕ ಹಾಗೂ ನಾಯಕ ರೋಹಿತ್ ಶರ್ಮಾ ಬಾರಿಸಿದ ಅರ್ಧಶತಕದ ನೆರವಿನಿಂದ 12 ಎಸೆತ ಬಾಕಿ ಇರುವಂತೆಯೇ ತಂಡ ಗೆಲುವಿನ ನಗೆ ಬೀರಿದೆ.

ಸದ್ಯ ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಒಂದು ವೇಳೆ ಆರ್‌ಸಿಬಿ-ಗುಜರಾತ್ ನಡುವಿನ ಪಂದ್ಯ ಮಳೆಯಿಂದ ರದ್ದಾದರೇ, ಆರ್‌ಸಿಬಿ ಸೋಲು ಕಂಡರೆ ಮುಂಬೈ ಇಂಡಿಯನ್ಸ್ ತಂಡವು ನಾಲ್ಕನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಲಿದೆ. ಒಂದು ವೇಳೆ ಆರ್‌ಸಿಬಿ ಪಂದ್ಯ ಜಯಿಸಿದರೆ, ಮುಂಬೈ ಪ್ಲೇ ಆಫ್‌ ಕನಸು ಭಗ್ನವಾಗಲಿದೆ.

ಸನ್‌ರೈಸರ್ಸ್ ಹೈದರಾಬಾದ್ ನೀಡಿದ್ದ 201 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು ಆರಂಭದಲ್ಲೇ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ವಿಕೆಟ್ ಕಳೆದುಕೊಂಡಿತು. ಇಶಾನ್ ಕಿಶನ್‌ 12 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 14 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಎರಡನೇ ವಿಕೆಟ್‌ಗೆ ಜತೆಯಾದ ನಾಯಕ ರೋಹಿತ್ ಶರ್ಮಾ ಹಾಗೂ ಕ್ಯಾಮರೋನ್ ಗ್ರೀನ್ ಸ್ಪೋಟಕ ಶತಕದ ಜತೆಯಾಟವಾಡುವ ಮೂಲಕ ಸನ್‌ರೈಸರ್ಸ್‌ ಹೈದರಾಬಾದ್‌ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ರೋಹಿತ್ ಶರ್ಮಾ ಕೇವಲ 37 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 56 ರನ್ ಬಾರಿಸಿ ಮಯಾಂಕ್ ದಾಗರ್‌ಗೆ ವಿಕೆಟ್ ಒಪ್ಪಿಸಿದರು.

ಗ್ರೀನ್‌ 47 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 8 ಸಿಕ್ಸರ್ 8 ಸಹಿತ ಅಜೇಯ ಶತಕ ಸಿಡಿಸಿದರು. ಮತ್ತೊಂದು ತುದಿಯಲ್ಲಿ ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 4 ಬೌಂಡರಿ ಸಹಿತ ಅಜೇಯ 25 ರನ್ ಸಿಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!