ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಇದರ ಪರಿಣಾಮ ಮೂವರು ಯೋಧರು ಗಾಯಗೊಂಡಿದ್ದಾರೆ.
ಶ್ರೀನಗರದ ಹರಿ ಸಿಂಗ್ ಹೈ ಸ್ಟ್ರೀಟ್ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿರುವುದಾಗಿ ಭದ್ರತಾ ಪಡೆ ಮುಖ್ಯಸ್ಥ ಡಿ ಕೆ ಬೂರಾ ಮಾಹಿತಿ ನೀಡಿದ್ದಾರೆ.
ಈಗಾಗಲೇ ನಾಳೆ ಗಣರಾಜ್ಯೋತ್ಸವ ಆಚರಿಸಲಾಗ್ತಿರುವ ಹಿನ್ನೆಲೆ ಪ್ರಧಾನಿ ಮೋದಿ ಸಹಿತ ಪ್ರಮುಖ ನಾಯಕರಿಗೆ ಜೀವ ಬೆದರಿಕೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.