Sunday, November 27, 2022

Latest Posts

ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ, ಇಬ್ಬರು ವಲಸಿಗರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಗರದಲ್ಲಿ ಉಗ್ರರು ಗ್ರೆನೇಡ್ ಎಸೆದಿದ್ದು, ಇಬ್ಬರು ವಲಸಿಗರು ಮೃತಪಟ್ಟಿದ್ದಾರೆ.

ಶೋಪಿಯಾನ್‌ನ ಹಾರ್ಮೆನ್‌ನಲ್ಲಿ ದಾಳಿ ನಡೆದಿದ್ದು, ಉತ್ತರ ಪ್ರದೇಶದ ಕಾರ್ಮಿಕರಾದ ಮೊನೀಶ್ ಕುಮಾರ್, ರಾಮ್ ಸಾಗರ್ ಗಂಭೀರವಾಗಿ ಗಾಯಗೊಂಡಿದ್ದರು. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಗ್ರೆನೇಡ್ ಎಸೆದ ಇಮ್ರಾನ್ ಬಶೀರ್ ಗನಿ ಎಂಬಾತನನ್ನು ಶೋಪಿಯಾನ್ ಪೊಲೀಸರು ಬಂಧಿಸಿದ್ದಾರೆ. ಈತ ನಿಷೇಧಿತ ಲಷ್ಕರ್ ಎ ತೊಯ್ಬಾ ಸಂಘಟನೆಗೆ ಸೇರಿದವನಾಗಿದ್ದಾನೆ. ತನಿಖೆ ಮುಂದುವರಿದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!