ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ಸಚಿವ ಕಾಶಿಂ ವಶುಮ್ ನಿವಾಸದ ಮೇಲೆ ಗ್ರೆನೇಡ್ ದಾಳಿಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿರುವ ಸಚಿವ ಕಾಶಿಂ ವಶುಮ್ ಅವರ ನಿವಾಸದ ಮೇಲೆ ಶಂಕಿತ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ಹಾನಿಯಾಗಿದೆ.
ಶನಿವಾರ ರಾತ್ರಿ ನಡೆದ ಈ ಘಟನೆಯಲ್ಲಿ ಸಚಿವರ ಮನೆಯ ಗೋಡೆಗಳು ಸೇರಿದಂತೆ ಇತರೆ ಭಾಗಗಳಿಗೆ ಹಾನಿಯಾಗಿದೆ. ಆದರೆ ಯಾರಿಗೂ ಗಾಯಗಳಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗ್ರೆನೇಡ್ ದಾಳಿ ಹೊಣೆಯನ್ನು ಯಾರು ಹೊತ್ತಿಕೊಂಡಿಲ್ಲ. ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಎಲ್ಲಾ ಆಯಾಮಾಗಳಲ್ಲಿ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸಚಿವ ಕಾಶಿಂ ವಶುಮ್ ಅವರಯ ಆಡಳಿತರೂಢ ಮಿತ್ರಪಕ್ಷವಾದ ನಾಗಾ ಪೀಪಲ್ಸ್ (ಎನ್‌ಪಿಎಫ್) ಶಾಸರಕಾಗಿದ್ದಾರೆ. ಗ್ರೆನೇಡ್ ದಾಳಿ ನಡೆದ ಸಂದರ್ಭದಲ್ಲಿ ನಾನು ಸೇರಿದಂತೆ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ ಎಂದು ವಶುಮ್ ಹೇಳಿದ್ದಾರೆ.