September 28, 2026
Monday, September 28, 2026
spot_img

ಗ್ರೆನೇಡ್ ಪತ್ತೆ ಪ್ರಕರಣ: ಮೋಸ್ಟ್ ವಾಂಟೆಡ್ ಶಂಕಿತ ಉಗ್ರ ಎನ್‌ಐಎ ಬಲೆಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

2023ರಲ್ಲಿ ನಡೆದ ಗ್ರೆನೇಡ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಶಂಕಿತನನ್ನು ನ್ಯಾಷನಲ್ ಇನ್ವೆಸ್ಟಿಗೇಷನ್ ಏಜನ್ಸಿ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತನನ್ನು ಅರ್ಷದ್ ಖಾನ್ ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ, ಈತನನ್ನು ಮೊದಲಿಗೆ ಸಿಸಿಬಿ ಅಧಿಕಾರಿಗಳು ಶಂಕೆ ಮೇರೆಗೆ ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಆತ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಪ್ರಕರಣವನ್ನು ನಂತರ ಎನ್‌ಐಎಗೆ ಹಸ್ತಾಂತರಿಸಲಾಗಿತ್ತು. ಕೋರ್ಟ್‌ಗೆ ಗೈರುಹಾಜರಾಗಿದ್ದ ಹಿನ್ನೆಲೆಯಲ್ಲಿ ಅವನ ವಿರುದ್ಧ ಪ್ರೊಕ್ಲಮೇಷನ್ ಜಾರಿಯಾಗಿತ್ತು.

ಇದನ್ನೂ ಓದಿ:

ಆರ್‌.ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಎನ್‌ಐಎ ತಂಡ ಶಂಕಿತನನ್ನು ಮತ್ತೆ ವಶಕ್ಕೆ ಪಡೆದುಕೊಂಡಿದೆ. ಅರ್ಷದ್ ಖಾನ್, ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ರೂವಾರಿ ಜುನೈದ್ ಅಹ್ಮದ್‌ನ ಆಪ್ತ ಸಹಚರನಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಜುನೈದ್ ವಿದೇಶದಲ್ಲಿ ತಲೆಮರೆಸಿಕೊಂಡಿರುವುದಾಗಿ ತಿಳಿದುಬಂದಿದೆ.

Must Read