ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಮಠದ ಹುಡುಗ, ಆದಿಚುಂಚನಗಿರಿ ಮಠದಲ್ಲಿ ಬೆಳೆದಿದ್ದು. ನಾನು ಜೆಡಿಎಸ್‌ಗೆ ಬರಲು ಆದಿಚುಂಚನಗಿರಿಯ ಹಿರಿಯ ಸ್ವಾಮೀಜಿಗಳು ಕಾರಣ ಎಂದು ಸಚಿವ ಜಮೀರ್ ಅಹ್ಮದ್ ಟಾಂಗ್ ಕೊಟ್ಟಿದ್ದಾರೆ.
ಮಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಮುಸ್ಲಿಮರು ನನಗೆ ಬೇಕಾಗಿಲ್ಲ ಅಂತ ಹೇಳಿದ್ರು. ಈ ಹಿನ್ನೆಲೆಯಲ್ಲಿ ನಾನು ಹೇಳಿಕೆ ನೀಡಿದ್ದು. ಮುಸ್ಲಿಂ ವೋಟ್ ಬೇಡ ಅಂತ ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಿ ಅಲ್ವಾ, ಎಷ್ಟು ಸರಿ ಅಂತ ಕೇಳಿದ್ದು. ನಿನ್ನೆಯೂ ಕುಮಾರಸ್ವಾಮಿ ಅದೇ ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.