ಗೃಹ ಜ್ಯೋತಿ ಯೋಜನೆಗೆ ಮುಗಿಬಿದ್ದ ಜನ: 10 ದಿನಗಳಲ್ಲಿ ಬಂತು 70.05 ಲಕ್ಷ ಅರ್ಜಿಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೃಹ ಜ್ಯೋತಿ ಯೋಜನೆಗೆ ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ 70,05,892 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

ಜೂನ್ 27, ಮಂಗಳವಾರ ಒಂದೇ ದಿನ ಸಂಜೆ 6 ಗಂಟೆಯ ವರೆಗೆ ಬೆಸ್ಕಾಂ(BESCOM) ವ್ಯಾಪ್ತಿಯಲ್ಲಿ 2,58,263 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಸೆಸ್ಕ್ ನಲ್ಲಿ 98,842, ಜೆಸ್ಕಾಂನಲ್ಲಿ 63,435, ಹೆಸ್ಕಾಂನಲ್ಲಿ 1,19,309, ಹುಕ್ಕೇರಿ ಯಲ್ಲಿ (HRECS) 2,926, ಮೆಸ್ಕಾಂನಲ್ಲಿ – 76,771 ಸೇರಿದಂತೆ ರಾಜ್ಯದ್ಯಂತ ಒಟ್ಟು 6,19,546 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

ರಾಜ್ಯದ ಒಟ್ಟು 6 ವಿದ್ಯುತ್ ನಿಗಮಗಳಲ್ಲಿ ಗೃಹ ಜ್ಯೋತಿ ಯೋಜನೆ(Gruhajyoti scheme)ಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ವೇಗ ಪಡೆದಿದ್ದು, ಪ್ರತಿ ನಿತ್ಯ ಕನಿಷ್ಠ 10 ಲಕ್ಷಕ್ಕೂ ಹೆಚ್ಚು ಗ್ರಾಹಕರು ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದಾರೆ.

ರಾಜ್ಯದ ಇ-ಆಡಳಿತ ಗೃಹ ಜ್ಯೋತಿ ಯೋಜನೆಗೆ ಪ್ರತ್ಯೇಕವಾಗಿ ನೋಂದಣಿ ಲಿಂಕ್ ನೀಡಿದ ಬಳಿಕ ಅರ್ಜಿ ಸಲ್ಲಿಕೆಯು ದುಪ್ಪಟ್ಟಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲದೆ ವಿದ್ಯುತ್ ಕಚೇರಿ, ನಾಡಕಚೇರಿ ಹಾಗೂ ಕಂಪ್ಯೂಟರ್, ಲ್ಯಾಪ್’ಟಾಪ್, ಮೊಬೈಲ್ ಫೋನ್ ನಲ್ಲಿ ಅಧಿಕೃತ ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಾಯಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!