October 18, 2026
Sunday, October 18, 2026
spot_img

ಗೃಹ ಜ್ಯೋತಿ ಯೋಜನೆ ನಿಲ್ಲಲ್ಲ.. ಟೆನ್ಶನ್ ಬೇಡ: ಬೆಸ್ಕಾಂನಿಂದ ಸಿಕ್ತು ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಪರಿಶೀಲನೆ ಕಾರ್ಯ ಆರಂಭವಾಗಿದ್ದು, ಬಾಡಿಗೆದಾರರು ಯಾವುದೇ ಆತಂಕಪಡಬೇಕಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಸಮೀಕ್ಷೆ ವೇಳೆ ಬೆಸ್ಕಾಂ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ, ಹಳೆಯ ಬಾಡಿಗೆದಾರರ ದಾಖಲೆಗಳನ್ನು ತೆಗೆದುಹಾಕಿ, ಪ್ರಸ್ತುತ ವಾಸಿಸುತ್ತಿರುವ ಬಾಡಿಗೆದಾರರ ಆಧಾರ್ ಹಾಗೂ ಅಗತ್ಯ ಮಾಹಿತಿಯನ್ನು ನವೀಕರಿಸಲಿದ್ದಾರೆ. ಇದರಿಂದ ಯೋಜನೆಯ ಸೌಲಭ್ಯಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ತಿಳಿಸಲಾಗಿದೆ.

ಇದನ್ನೂ ಓದಿ:

ಆಧಾರ್ ಮಾಹಿತಿ ಬದಲಾವಣೆಗಾಗಿ ಫಲಾನುಭವಿಗಳು ಬೆಸ್ಕಾಂ ಕಚೇರಿಗೆ ಭೇಟಿ ನೀಡುವ ಅಗತ್ಯವಿಲ್ಲ. ಸಿಬ್ಬಂದಿಯೇ ಮನೆಗೆ ಬಂದು ದಾಖಲೆಗಳನ್ನು ಪರಿಶೀಲಿಸಿ ನವೀಕರಣ ಮಾಡಲಿದ್ದಾರೆ. ಈ ಪ್ರಕ್ರಿಯೆ ಕೇವಲ ದಾಖಲೆ ಪರಿಶೀಲನೆಗಾಗಿ ಮಾತ್ರವಾಗಿದ್ದು, ಮನೆ ಮಾಲೀಕರು ಹಾಗೂ ಬಾಡಿಗೆದಾರರು ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

Must Read