ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನುಡಿದಂತೆ ನಡೆಯುತ್ತಿಲ್ಲ. ಕಳೆದ ನಾಲ್ಕೈದು ತಿಂಗಳಿಂದ ಗ್ಯಾರಂಟಿ ಹಣವೇ ಬಂದಿಲ್ಲ. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡುತ್ತೇವೆ ಎಂದು ಹೇಳಿದ್ದು ಸುಳ್ಳು ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಯುವಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಯಾವ ವಿಳಂಬ ಮಾಡದೆ, ಕಾರಣವೂ ಹೇಳದೆ ಗೃಹಲಕ್ಷ್ಮಿ, ಯುವನಿಧಿ ಹಣ ಜಮೆ ಮಾಡುವ ನಿಗದಿತ ದಿನಾಂಕ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿ ಐದು ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ವಿಪರ್ಯಾಸವೆಂದರೆ, ಈ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ ಮೂರ್ನಾಲ್ಕು ತಿಂಗಳು ಕಾಯಬೇಕಾದ ಪರಿಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ.