ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು, ಶೀಘ್ರವೇ ಫೆಬ್ರವರಿ ತಿಂಗಳ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಂಧನ ಬೆಲೆ ಏರಿಕೆ, ಗ್ಯಾಸ್, ಪ್ರತಿಯೊಂದು ದಿನಸಿ ಬೆಲೆಗಳ ಏರಿಕೆಯಾಗಿದೆ. ಇದರ ಬಗ್ಗೆ ಮೊದಲು ಬಿಜೆಪಿಯವರು ಪ್ರಶ್ನಿಸಲಿ, ಹಾಲಿನ ದರ ಏರಿಸಿರುವುದರಿಂದ ರೈತರಿಗೆ ಅನುಕೂಲ ಆಗಿದೆ ಎಂದು ಸಮರ್ಥಿಸಿದರು.
ರಾಜ್ಯ ಬಿಜೆಪಿಯಲ್ಲಿ ಘಟಾನುಘಟಿ ನಾಯಕರಿದ್ದಾರೆ, ರಾಜ್ಯಕ್ಕೆ ನ್ಯಾಯಕೊಡಿಸಲಿ. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿದರೆ ಪ್ರಯೋಜನವಿಲ್ಲ. ಕೇಂದ್ರದಲ್ಲಿ ಪ್ರಶ್ನಿಸಲಾಗದ ನಾಯಕರು ಈಗ ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಲು ಮುಂದಾಗಿರುವುದು ಹಾಸ್ಯಸ್ಪದ ಎಂದು ಸಚಿವರು ತಿಳಿಸಿದರು.