ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ ಯೋಜನೆಯಿಂದ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದಿರುವ ಬಗ್ಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ ಪ್ರಶ್ನೆ ಕೇಳಿದ್ರು.ಕೊಪ್ಪಳದಲ್ಲಿ ಸರಿಯಾಗಿ ದೇವದಾಸಿಯರಿಗೆ ಮಾಶಾಸನ ಸಿಗುತ್ತಿಲ್ಲ. ದೇವದಾಸಿಯರ ಸರ್ವೆ ಸರಿಯಾಗಿ ಆಗಿಲ್ಲ. ಗೃಹಲಕ್ಷ್ಮಿ ಯೋಜನೆ ದೇವದಾಸಿಯರಿಗೆ ನೀಡಬೇಕು ಅಂತ ಒತ್ತಾಯ ಮಾಡಿದ್ರು.
ಇದಕ್ಕೆ ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಡಿಬಿಟಿ ಮೂಲಕ ದೇವದಾಸಿಯರಿಗೆ ಮಾಶಾಸನವನ್ನು ಸಕ್ರಮವಾಗಿ ಒದಗಿಸಲಾಗುವುದು. ಎಲ್ಲಿಯೂ ಮಾಶಾಸನ ಸೋರಿಕೆ ಆಗ್ತಿಲ್ಲ. ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿಯರ ಸಮೀಕ್ಷೆ ಸರಿಯಾಗಿ ನಡೆದಿಲ್ಲ, ಇನ್ನೊಮ್ಮೆ ಸಮೀಕ್ಷೆ ನಡೆಸುತ್ತೇವೆ ಎಂದರು.