ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅದ್ಧೂರಿ ಚಾಲನೆ ದೊರೆಯಲಿದೆ. ಬೃಹತ್ ಕಾರ್ಯಕ್ರಮ ಇದಾಗಿದ್ದು, ರಾಜ್ಯದ ಕಾಂಗ್ರೆಸ್ ಮುಖಂಡರು ಎರಡು ದಿನಗಳ ಮುನ್ನವೇ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಇನ್ನು ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಆಗಮಿಸಲಿದ್ದು, ಮಹಾರಾಜ ಕಾಲೇಜು ಮೈದಾನದ ಸುತ್ತ ಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಎಲ್ಲ ಬಗೆಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಆಂಟಿ ಬಾಂಬ್ ಸ್ಕ್ವಾಡ್, ಶ್ವಾನಗಳು ಮೈದಾನದ ಸುತ್ತ ಗಸ್ತು ತಿರುಗುತ್ತಿವೆ. ಇನ್ನು ದ್ವಾರಗಳಲ್ಲಿ ಮೆಟಲ್ ಡಿಟೆಕ್ಟರ್‌ಗಳನ್ನು ಅಳವಡಿಸಲಾಗಿದೆ.
ಅರಮನೆಯ ಶೈಲಿಯ ಪ್ರವೇಶ ದ್ವಾರ ಮಾಡಲಾಗಿದ್ದು, ಒಳಗೆ ಬರುವ ಪ್ರತಿಯೊಬ್ಬರನ್ನೂ ತಪಾಸಣೆ ಮಾಡಲಾಗುತ್ತಿದೆ.