ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಂಡ ಟ್ಯಾಕ್ಸ್ ಕಟ್ಟುತ್ತಿದ್ದರೆ ಮಾತ್ರ ಹೆಂಡತಿಗೆ ಗೃಹಲಕ್ಷ್ಮಿ ಯೋಜನೆ ಹಣ ಸಿಗುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಡ್ರಾಫ್ಟ್ ಒಂದು ವೈರಲ್ ಆಗಿದ್ದು, ಇದರಲ್ಲಿ ಕೆಲವು ಬದಲಾವಣೆಗಳು ಆಗಲಿವೆ, ಜಾತಿ ಬದಲು ವರ್ಗ ಎಂದು ಬದಲಾಯಿಸಲಾಗುವುದು, ಶೇ.90ರಷ್ಟು ಬಿಪಿಎಲ್ ಕಾರ್ಡ್ ಮಹಿಳೆಯರೇ ಯೋಜನೆಯ ಪ್ರಮುಖ ಫಲಾನುಭವಿಗಳಾಗಲಿದ್ದಾರೆ ಎಂದಿದ್ದಾರೆ.
ಮಗ ಟ್ಯಾಕ್ಸ್ ಕಟ್ಟುತ್ತಿದ್ದಾನೆ ಎಂದರೆ ತಾಯಿಗೆ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ ಎಂಬ ಸುದ್ದಿ ಹಿನ್ನೆಲೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.