ಪಿಯುಸಿ ಟಾಪರ್‌ ವಿದ್ಯಾಭ್ಯಾಸಕ್ಕೆ ನೆರವಾಗಿದ್ದು ಗೃಹಲಕ್ಷ್ಮೀ ಹಣ: ಖುಷಿ ಹಂಚಿಕೊಂಡ ರಾಹುಲ್‌ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಿನ್ನೆಯಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ವೇದಾಂತ್‌ ನಾವಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ.

ವೇದಾಂತ್‌ ಗೃಹಲಕ್ಷ್ಮಿ ಯೋಜನೆಯ ಹಣವು ವಿದ್ಯಾಭ್ಯಾಸಕ್ಕೆ ನೆರವಾಯಿತು ಎಂದು ಹೇಳಿರುವ ವಿಡಿಯೋವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶೇರ್‌ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕಿರು ವಿಡಿಯೋ ಹಂಚಿಕೊಂಡಿರುವ ಕರ್ನಾಟಕ ಕಾಂಗ್ರೆಸ್, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ವಿವಿಧ ರೀತಿಯಲ್ಲಿ ಆಸರೆಯಾಗಿರುವುದನ್ನು ಕಂಡು ಸಾರ್ಥಕ ಭಾವ ಮೂಡುತ್ತಿದೆ. ಕೇವಲ ಹತ್ತು ತಿಂಗಳಲ್ಲಿ ನಮ್ಮ ಯೋಜನೆಯಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಪರಿಣಾಮಕಾರಿ ಬದಲಾವಣೆ ತರುತ್ತಿರುವುದು ಹೆಮ್ಮೆಯ ಸಂಗತಿ ಎಂದಿದೆ.

ತಂದೆಯನ್ನು ಕಳೆದುಕೊಂಡ ದ್ವಿತೀಯ ಪಿಯುಸಿಯ ಕಲಾ ವಿಭಾಗದ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವೇದಾಂತ್ ಕುಟುಂಬಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ಶಿಕ್ಷಣ ಪಡೆಯಲು ನೆರವಾಗಿರುವುದು ಯೋಜನೆಯ ಸಾರ್ಥಕತೆಗೆ ಸಾಕ್ಷಿ. ಇಂತಹ ಅದೆಷ್ಟೋ ಜನರ ಬದುಕಲ್ಲಿ ಬದಲಾವಣೆಯನ್ನು ತಂದಿವೆ ನಮ್ಮ ಗ್ಯಾರಂಟಿ ಯೋಜನೆಗಳು. ಕಾಂಗ್ರೆಸ್ ಜನರ ಬದುಕನ್ನು ಕಟ್ಟಿಕೊಡುವ ಮೂಲಕ ದೇಶವನ್ನು ಕಟ್ಟಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!