ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹಲಕ್ಷ್ಮೀ ಯೋಜನೆಯಿಂದ ಹಣ ಬರುತ್ತದೆ ಎಂದು ಸರ್ಕಾರ ಹೇಳಿದೆ ಆದರೆ ನಮಗೆ ಹಣ ದೊರೆತಿಲ್ಲ ಎಂದು ಹಲವರು ದೂರಿದ್ದು, ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೌನ ಮುರಿದಿದ್ದಾರೆ.
ಆಗಸ್ಟ್ ತಿಂಗಳಿನಲ್ಲಿ ಸಲ್ಲಿಕೆಯಾದ ಅರ್ಜಿಗಳಲ್ಲಿ ಎಲ್ಲ ಫಲಾನುಭವಿಗಳಿಗೂ ಹಣ ಜಮೆ ಆಗಿಲ್ಲ, ಇನ್ನು 5.5 ಲಕಷ್ ಅರ್ಜಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಚಾಲ್ತಿಯಲ್ಲಿದೆ. ಹಣ ಜಮೆಯಾಗದಿರುವುದಕ್ಕೆ ಕಾರಣವೂ ಇದೆ.
ಅರ್ಜಿದಾರರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮಂದಿ ಮರಣ ಹೊಂದಿದ್ದು, ಅನರ್ಹಗೊಳಿಸಲಾಗಿದೆ. ಇನ್ನು ಐದು ಲಕ್ಷಕ್ಕೂ ಹೆಚ್ಚು ಮಂದಿಯ ಆಧಾರ್ ಬ್ಯಾಂಕ್ ಜೋಡಣೆ ಆಗಿಲ್ಲ. ಒಂದು ಲಕ್ಷಕ್ಕೂ ಹೆಚ್ಚು ಅರ್ಜಿದಾರರ ಹೆಸರು ಹಾಗೂ ವಿಳಾಸದಲ್ಲಿ ವ್ಯತ್ಯಾಸವಿದೆ ಎಂದಿದ್ದಾರೆ.