ಗೃಹಲಕ್ಷ್ಮಿ ಯೋಜನೆ ನಿತ್ಯ, ಸತ್ಯ, ನಿರಂತರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹುನಿರೀಕ್ಷಿತ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. ಇದು ನಿತ್ಯ, ಸತ್ಯ, ನಿರಂತರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ನಾನು ಈಗಾಗಲೇ ಹಲವು ಬಾರಿ ಗೃಹಲಕ್ಷ್ಮಿ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆದೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್‌ಗೆ ಪಾವತಿಯಾಗಲಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ್ಟೆ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಕೂಡ ಅಷ್ಟು ಬಾಕಿ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಸ್ಪಷ್ಟಪಡಿಸಿದರು.

ಅಂಗನವಾಡಿಗಳಲ್ಲಿ ಮುಂದಿನ ತಿಂಗಳಿಂದ ಗಟ್ಟಿಬೆಲ್ಲ ವಿತರಣೆ
ಪಾಲಕರು ನಿರಾಕರಿಸಿದ ಕಾರಣ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಸಚಿವರು ಹೇಳಿದರು. ಒಂದೂವರೆ ವರ್ಷದ ಹಿಂದಿ‌ನಿಂದಲೇ ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲ ನೀಡಲಾಗುತ್ತಿತ್ತು. ಆದರೆ, ಪಾಲಕರು ವಿರೋಧಿಸಿದ ಕಾರಣ, ಅಕ್ಟೋಬರ್ 1ರಿಂದಲೇ ಗಟ್ಟಿ ಬೆಲ್ಲ ನೀಡುವುದಾಗಿ ಹೇಳಿದರು.

 

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!