ಗೃಹಲಕ್ಷ್ಮೀ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ, ಅಂದೇ ಮಹಿಳೆಯರ ಖಾತೆಗೆ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30ರಂದು ಚಾಲನೆ ದೊರೆಯಲಿದ್ದು, ಸರ್ಕಾರ ಅಂದೇ ಮಹಿಳೆಯರ ಖಾತೆಗೆ 2 ಸಾವಿರ ರೂ. ಹಣ ಹಾಕಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು 4 ಜಿಲ್ಲೆಗಳಲ್ಲಿ 13,81,430 ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ. 1,09,54,000 ಮಹಿಳೆಯರ ಖಾತೆಗೆ ತಲಾ 2,000 ರೂ. ವರ್ಗಾವಣೆ ಮಾಡಲಾಗುವುದು ಎಂದು ಹೇಳಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಭಾನುವಾರ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ವೇದಿಕೆ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿದರು. ಈ ವೇಳೆ ಸಚಿವ ಮಹದೇವಪ್ಪ, ಶಾಸಕ ಕೆ. ಹರೀಶ್ ಗೌಡ, ಡಿ. ರವಿಶಂಕರ್, ದರ್ಶನ್​ ಜೊತೆಗಿದ್ದರು.

ಗೃಹಲಕ್ಷ್ಮೀ ಯೋಜನೆಗೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಚಾಲನೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದು,

ಸರ್ಕಾರಿ ಬಸ್‌ಗಳ ಮೂಲಕ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಸಿದ್ಧತೆ ನಡೆಯುತ್ತಿದೆ. ಅದ್ಧೂರಿಯಾಗಿ ನಡೆಸಲು ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!