ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಸಸ್ತಾಪೂರ್ ಬಂಗ್ಲಾ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕಿರಾಣಿ ಅಂಗಡಿಗೆ ಬೆಂಕಿ ತಗುಲಿ ಬರೋಬ್ಬರಿ 11 ಲಕ್ಷ ರೂ. ಮೌಲ್ಯದ ವಸ್ತುಗಳ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ಮಹೇಶ್ ರೆಡ್ಡಿ ಮಾಲೀಕತ್ವದ ಕಿರಾಣಿ ಅಂಗಡಿಗೆ ಬೆಂಕಿ ತಗುಲಿದ್ದು, ಒಳಗಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.
ರಾತ್ರಿ ಅಂಗಡಿ ಮುಚ್ಚಿ ಮನೆಗೆ ಹೋಗಿದ್ದರು. ಈ ವೇಳೆ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದ್ದು, ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಷ್ಟರಲ್ಲಿ ಅಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.
ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.