ಭಾರೀ ಮಳೆಗೆ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯ ನೆಲಮಹಡಿ ಜಲಾವೃತ: ವಿದ್ಯುತ್ ಪೂರೈಕೆ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಂಗಳವಾರ ತಡರಾತ್ರಿ ಸುರಿದ ಭಾರೀ ಮಳೆಗೆ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆ ಕಟ್ಟಡದ ನೆಲ ಮಹಡಿಯಲ್ಲಿ ಜಲಾವೃತವಾಗಿದೆ.

ಹೀಗಾಗಿ ರೋಗಿಗಳನ್ನು ಹಳೆಯ, ನೂರು ಹಾಸಿಗೆಯ ಸರ್ಕಾರಿ ಆಸ್ಪತ್ರೆಗೆ ಮತ್ತು ಆರು ಮಕ್ಕಳನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಸಿಬ್ಬಂದಿ ಒತ್ತಾಯಿಸಿದರು. ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಆರಂಭವಾದ ರೋಗಿಗಳ ಸ್ಥಳಾಂತರ ಬುಧವಾರ ಸಂಜೆಯವರೆಗೂ ಮುಂದುವರೆಯಿತು. ಇದು ಇನ್ನೊಂದು ದಿನ ಮುಂದುವರಿಯಬಹುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಶಾರ್ಟ್ ಸರ್ಕ್ಯೂಟ್ ಭೀತಿಯಿಂದ ಇಡೀ ಕಟ್ಟಡದ ವಿದ್ಯುತ್ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯುತ್ ಸಂಪರ್ಕವಿಲ್ಲದ ಕಾರಣ ಇಡೀ ಆಸ್ಪತ್ರೆ ಕತ್ತಲೆಯಲ್ಲಿ ಮುಳುಗಿತ್ತು. ವಿದ್ಯುತ್ ಪೂರೈಕೆಯಿಲ್ಲದಿದ್ದರೂ ರೋಗಿಗಳ ಚಿಕಿತ್ಸೆ ಮುಂದುವರಿದಿದೆ ಎಂದು ರೋಗಿಗಳ ಸಂಬಂಧಿಕರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯ ಕಟ್ಟಡದಿಂದ ನೀರನ್ನು ಹೊರ ಹಾಕಲು ಅಗ್ನಿಶಾಮಕ ದಳದ ಸಿಬ್ಬಂದಿ ಎರಡು ಮೋಟಾರ್‌ಗಳನ್ನು ನಿಯೋಜಿಸಿದ್ದಾರೆ. ಸದ್ಯ ನೀರನ್ನು ಹೊರಹಾಕಲಾಗುತ್ತಿದ್ದು, ಸೇಫ್ಟಿ ನೋಡಿಕೊಂಡ ನಂತರ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!